ಶುಕ್ರವಾರ, ಅಕ್ಟೋಬರ್ 30, 2020
27 °C

Covid-19 Karnataka Update| 24 ಗಂಟೆಗಳಲ್ಲಿ 6,892 ಪ್ರಕರಣ, 59 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಕಳೆದ 24 ಗಂಟೆಗಳಲ್ಲಿ ವರದಿಯಾಗಿರುವ 6,892 ಪ್ರಕರಣಗಳೂ ಸೇರಿದಂತೆ ರಾಜ್ಯದಲ್ಲಿ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ ಸೋಮವಾರ 5,82,458 ಕ್ಕೆ ಏರಿಕೆಯಾಗಿದೆ.

ಇನ್ನು ಈ 24 ಗಂಟೆಗಳಲ್ಲಿ ರಾಜ್ಯದಲ್ಲಿ 59 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಈ ವರೆಗೆ ಕೋವಿಡ್‌ಗೆ ಪ್ರಾಣ ತೆತ್ತವರ ಸಂಖ್ಯೆ 8,641ಕ್ಕೆ ಏರಿದೆ.

ಕಳೆದ ಒಂದು ದಿನದ ಅವಧಿಯಲ್ಲಿ 7,509 ಮಂದಿ ಕೊರೊನಾ ವೈರಸ್‌ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಈ ವರೆಗೆ ಗುಣಮುಖರಾದವರ ಸಂಖ್ಯೆ 4,69,750 ಆಗಿದೆ. ಸದ್ಯ ರಾಜ್ಯದಲ್ಲಿ ಸಕ್ರಿಯವಾಗಿರುವುದು 1,04,048 ಪ್ರಕರಣಗಳು ಮಾತ್ರ.

ಇನ್ನುಳಿದಂತೆ 822 ಮಂದಿ ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ದಿನದ ಅವಧಿಯಲ್ಲಿ 2,722 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟಾರೆ ಸೋಂಕು ಪ್ರಕರಣಗಳು 2,23,569 ಕ್ಕೆ ಏರಿಕೆಯಾಗಿದೆ. ಈ ಒಂದು ದಿನದ ಅವಧಿಯಲ್ಲಿ ಬೆಂಗಳೂರಲ್ಲಿ 9 ಮರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಈ ವರೆಗೆ 2,845 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು