ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 7,542 ಹೊಸ ಪ್ರಕರಣ ದೃಢ, 73 ಮಂದಿ ಸಾವು

Last Updated 16 ಅಕ್ಟೋಬರ್ 2020, 14:50 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 7,542 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 73 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,51,390ಕ್ಕೆ ಏರಿಕೆಯಾಗಿದ್ದು, ಆ ಪೈಕಿ ಇದುವರೆಗೆ 10,356 ಮಂದಿ ಸಾವಿಗೀಡಾಗಿದ್ದಾರೆ.

ಇಂದು ಒಂದೇ ದಿನ 8,580 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 6,28,588 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 1,12,427 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 946 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 3,441 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 24 ಮಂದಿ ಮೃತಪಟ್ಟಿದ್ದಾರೆ. 3,021 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ಮೈಸೂರಿನಲ್ಲಿ 404, ಬೆಂಗಳೂರು ಗ್ರಾಮಾಂತರ 345, ಬೆಳಗಾವಿ 289, ದಾವಣಗೆರೆ 280, ಚಿಕ್ಕಬಳ್ಳಾಪುರ 270, ಮಂಡ್ಯ 246, ಉಡುಪಿ ಜಿಲ್ಲೆಯಲ್ಲಿ 211 ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT