ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ 600 ಹೊಸ ಪ್ರಕರಣ, 3 ಸಾವು

Last Updated 4 ಜನವರಿ 2021, 18:17 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ನಿಂದಾಗಿ ಉಡುಪಿ, ವಿಜಯಪುರ ಮತ್ತು ಬೆಂಗಳೂರು ನಗರದಲ್ಲಿ ತಲಾ ಒಬ್ಬರು ಸೋಮವಾರ ಸಾವಿಗೀಡಾಗಿದ್ದಾರೆ.

ಬೆಂಗಳೂರು ನಗರದಲ್ಲಿ ಅತೀ ಹೆಚ್ಚು 298 ಪ್ರಕರಣಗಳು ದಾಖಲಾದರೆ, ಹಾವೇರಿ ಜಿಲ್ಲೆಯಲ್ಲಿ ಯಾವುದೇ ಸೋಂಕು ಪ್ರಕರಣ ದಾಖಲಾಗಿಲ್ಲ. ಉಳಿದಂತೆ, ಬಾಗಲಕೋಟೆ, ರಾಮನಗರ ಜಿಲ್ಲೆಯಲ್ಲಿ ತಲಾ ಒಂದು, ದಾವಣಗೆರೆ, ಗದಗ, ಕೊಡಗು, ಕೊಪ್ಪಳ ಜಿಲ್ಲೆಯಲ್ಲಿ ತಲಾ ಎರಡು ಸೋಂಕು ಪ್ರಕರಣಗಳು ದೃಢಪಟ್ಟಿವೆ.

ಸೋಮವಾರ ಒಟ್ಟು 600 ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. 1,283 ಮಂದಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಸೋಮವಾರ ಬಿಡುಗಡೆಯಾಗಿದ್ದು ಈವರೆಗೆ ಒಟ್ಟು ಸೋಂಕಿತ 9,22,538 ಮಂದಿಯಲ್ಲಿ 9,00,202 ಮಂದಿ ಬಿಡುಗಡೆ ಆಗಿದ್ದಾರೆ. ಸಕ್ರಿಯ ಪ್ರಕರಣಗಳು 1,0207 ಇವೆ. ರಾಜ್ಯದಲ್ಲಿ ಕೋವಿಡ್‌ನಿಂದ ಈವರೆಗೆ 12,110 ಜನರು ಮೃತಪಟ್ಟಿದ್ದಾರೆ.

ಸದ್ಯ 198 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ.

ಕಳೆದ 14 ದಿನಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 61,753 ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 71,031 ಮಂದಿಯನ್ನು ಪತ್ತೆಹಚ್ಚಲಾಗಿದೆ. 23,130 ಜನರು ಕಳೆದ ಏಳು ದಿನಗಳಿಂದ ಕ್ವಾರಂಟೈನ್‌ನಲ್ಲಿ ಇದ್ದಾರೆ. ಸೋಮವಾರ 3,651 ಮಂದಿಯನ್ನು ರ‍್ಯಾಪಿಡ್‌ ಆ್ಯಂಟಿಜೆನ್ ಟೆಸ್ಟ್‌ಗೆ ಒಳಪಡಿಸಲಾಗಿದೆ. 95,515 ಮಂದಿಯನ್ನು ಆರ್‌ಟಿಪಿಸಿಆರ್‌ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT