ಬೆಂಗಳೂರು: ರಾಜ್ಯಕ್ಕೆ ಬ್ರಿಟನ್‌ನಿಂದ ಬಂದವರಲ್ಲಿ ಈವರೆಗೆ 37 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅವರೊಂದಿಗೆ ನೇರ ಸಂಪರ್ಕ ಹೊಂದಿದ್ದವರಲ್ಲಿ ಸೋಂಕಿತರಾದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2020ರ ಡಿ.9ರ ಬಳಿಕ ಬ್ರಿಟನ್‌ನಿಂದ ರಾಜ್ಯಕ್ಕೆ ಬಂದವರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮಂಗಳವಾರ 815 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.23 ಲಕ್ಷ ದಾಟಿದೆ. ಸೋಂಕಿತರಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,118ಕ್ಕೆ ತಲುಪಿದೆ.

ಒಂದೇ ದಿನ 1.23 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ತಿಂಗಳು ಐದು ದಿನಗಳಲ್ಲಿ 4.58 ಲಕ್ಷ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.

ಕೋವಿಡ್ ಪೀಡಿತರಲ್ಲಿ ಮತ್ತೆ 1,377 ಮಂದಿ ಗುಣಮುಖರಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 9.01 ಲಕ್ಷಕ್ಕೆ ತಲುಪಿದೆ. ಸೋಂಕಿತರಲ್ಲಿ ಸದ್ಯ 9,637 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 194 ಮಂದಿ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇದ್ದಾರೆ. ಕಳೆದ 14 ದಿನಗಳ ಅವಧಿಯಲ್ಲಿ 60 ಸಾವಿರ ನೇರ ಸಂಪರ್ಕಿತರು ಹಾಗೂ 69 ಸಾವಿರ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ 393 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.90 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 57 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 52,618ಕ್ಕೆ ತಲುಪಿದೆ. ದಕ್ಷಿಣ ಕನ್ನಡದಲ್ಲಿ 44, ಹಾಸನದಲ್ಲಿ 33, ತುಮಕೂರಿನಲ್ಲಿ 27, ಉಡುಪಿಯಲ್ಲಿ 26 ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 6, ಕಲಬುರ್ಗಿ ಮತ್ತು ಉತ್ತರ ಕನ್ನಡದಲ್ಲಿ ತಲಾ ಒಂದು ಮರಣ ಪ್ರಕರಣ ವರದಿಯಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.