ಗುರುವಾರ , ಮೇ 26, 2022
28 °C

Covid 19 Karnataka Updates: 27,156 ಕೋವಿಡ್ ಪ್ರಕರಣಗಳು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 27,156 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 14 ಮಂದಿ ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,17,297ಕ್ಕೆ ಏರಿದೆ.

ಒಂದೇ ದಿನ 7,827 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಮೃತಪಟ್ಟವರ ಒಟ್ಟು ಸಂಖ್ಯೆ 38,445ಕ್ಕೆ ಏರಿದೆ.

ರಾಜ್ಯದಲ್ಲಿ ಕೋವಿಡ್ ದೃಢ ಪ್ರಮಾಣ ಶೇಕಡ 12.45ಕ್ಕೆ ಏರಿದೆ. ಮರಣ ಪ್ರಮಾಣ ಶೇಕಡ 0.05ರಷ್ಟಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು 15,947 ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸಾವಿಗೀಡಾಗಿದ್ದಾರೆ. ಮೈಸೂರಿನಲ್ಲಿ 1,770, ಹಾಸನದಲ್ಲಿ 1,050, ತುಮಕೂರಿನಲ್ಲಿ 1,147 ಪ್ರಕರಣಗಳು ದೃಢಪಟ್ಟಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು