ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Updates: 22 ದಿನಗಳಲ್ಲಿ ಗರಿಷ್ಠ ಪ್ರಕರಣ

Last Updated 28 ಅಕ್ಟೋಬರ್ 2021, 18:54 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಗುರುವಾರ 478 ಕೋವಿಡ್ ಪ್ರಕರಣಗಳು ವರದಿಯಾಗಿವೆ. 22 ದಿನಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.

ಒಂದು ದಿನದಲ್ಲಿ 1.13 ಲಕ್ಷ ಮಾದರಿಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 0.42 ರಷ್ಟಿದೆ. 7 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 11 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್‌ ಸೇರಿದಂತೆ 10 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.

ಬೆಂಗಳೂರಿನಲ್ಲಿ 235 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 50ರ ಗಡಿಯೊಳಗೆ ಇವೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 29.87 ಲಕ್ಷಕ್ಕೆ ಏರಿಕೆಯಾಗಿದೆ.

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 8,557ಕ್ಕೆ ಏರಿಕೆ ಕಂಡಿದೆ. 16 ಜಿಲ್ಲೆಗಳಲ್ಲಿ 50ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಸೋಂಕಿತರಿದ್ದಾರೆ. ಬಾಗಲಕೋಟೆ ಸೇರಿದಂತೆ 6 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತರೊಳಗೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ (6,493) ಸಕ್ರಿಯ ಪ್ರಕರಣಗಳಿವೆ. ಸೋಂಕಿತರಲ್ಲಿ 334 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.40 ಲಕ್ಷ ದಾಟಿದೆ.

17 ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಏಳು ಮಂದಿ, ದಕ್ಷಿಣ ಕನ್ನಡದಲ್ಲಿ ನಾಲ್ವರು, ಕೋಲಾರ ಹಾಗೂ ಮೈಸೂರಿನಲ್ಲಿ ತಲಾ ಇಬ್ಬರು, ಹಾಸನ ಹಾಗೂ ರಾಮನಗರದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಮರಣ ಪ್ರಮಾಣ ದರವು ಶೇ 3.55 ರಷ್ಟು ದೃಢಪಟ್ಟಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,054ಕ್ಕೆ ಏರಿಕೆಯಾಗಿದೆ.

‘ಕೋವಿಡ್ ಎ.ವೈ 4.2 ಮಾರಣಾಂತಿಕವಲ್ಲ’
ಬೆಂಗಳೂರು:
ಕೊರೊನಾ ವೈರಾಣುವಿನ ಡೆಲ್ಟಾ ರೂಪಾಂತರದ ಹೊಸ ತಳಿ ಎ.ವೈ 4.2 ಬಗ್ಗೆ ಅಧ್ಯಯನಗಳು ನಡೆಯುತ್ತಿದ್ದು, ಇದು ಮಾರಣಾಂತಿಕವಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆ ಹೊಸ ತಳಿಯ ವೈರಾಣು ಪತ್ತೆಯಾಗಿದೆ. ಬ್ರಿಟನ್‌ನಲ್ಲಿ ಈ ತಳಿಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿವೆ.

ಡೆಲ್ಟಾ ರೂಪಾಂತರಿಯಿಂದದೇಶದಲ್ಲಿ ಎರಡನೇ ಅಲೆಯ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಈಗ ಅದರ ರೂಪಾಂತರ ತಳಿ ಕಾಣಿಸಿಕೊಂಡಿದ್ದು, ಪ್ರಕರಣಗಳ ಪತ್ತೆಗೆಶಂಕಿತ ಮಾದರಿಗಳನ್ನುವೈರಾಣು ಅನುಕ್ರಮಣಿಕೆ ಪರೀಕ್ಷೆ (ಜೀನೋಮ್‌ ಸೀಕ್ವೆನ್ಸಿಂಗ್‌) ನಡೆಸಲಾಗುತ್ತಿದೆ. ಇದು ಹೆಚ್ಚಿನ ಪ್ರಸರಣ ಹೊಂದುವ ಸಾಧ್ಯತೆಯಿದ್ದರೂ ಮಾರಣಾಂತಿಕವಲ್ಲ ಎಂದು ಇಲಾಖೆ ಹೇಳಿದೆ.

ರೂಪಾಂತರಿ ತಳಿಯ ಬಗ್ಗೆ ಹೆಚ್ಚಿನ ಅಧ್ಯಯನಗಳನ್ನು ನಡೆಸಲಾಗುತ್ತಿದೆ. ಇದರ ಬಗ್ಗೆ ಅನಗತ್ಯವಾಗಿ ಭಯಕ್ಕೆ ಒಳಗಾಗಬೇಕಿಲ್ಲ. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT