ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Updates: 347 ಹೊಸ ಪ್ರಕರಣ, 10 ಸಾವು

Last Updated 30 ಅಕ್ಟೋಬರ್ 2021, 15:02 IST
ಅಕ್ಷರ ಗಾತ್ರ

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 347 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 10 ಮಂದಿ ಸಾವಿಗೀಡಾಗಿದ್ದು, 255 ಮಂದಿ ಗುಣಮುಖರಾಗಿದ್ದಾರೆ.

ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,88,041ಕ್ಕೆ ಏರಿದ್ದು, 29,41,233ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕೋವಿಡ್‌ನಿಂದ ಮೃತರ ಒಟ್ಟು ಸಂಖ್ಯೆ 38,071ಕ್ಕೆ ಏರಿದೆ.

ರಾಜ್ಯದಲ್ಲಿ ಸದ್ಯ 8,708 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢ ಪ್ರಮಾಣ ಶೇಕಡಾ 0.31ರಷ್ಟಿದ್ದು, ಸಾವಿನ ಪ್ರಮಾಣ ಶೇಕಡಾ 2.88ರಷ್ಟಿದೆ.

ಬೆಂಗಳೂರಿನಲ್ಲಿ 166 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 4 ಸಾವು ಸಂಭವಿಸಿವೆ. ಮೈಸೂರಿನಲ್ಲಿ 44, ದಕ್ಷಿಣ ಕನ್ನಡದಲ್ಲಿ 21 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT