ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

covid-19 karnataka updates: 282 ಹೊಸ ಪ್ರಕರಣ, 13 ಸಾವು

Last Updated 27 ಅಕ್ಟೋಬರ್ 2021, 14:21 IST
ಅಕ್ಷರ ಗಾತ್ರ

ಬೆಂಗಳೂರು: 24 ಗಂಟೆಗಳಲ್ಲಿ 282 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 13 ಮಂದಿ ಸಾವಿಗೀಡಾಗಿದ್ದಾರೆ. 349 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಈವರೆಗೆ ಕೋವಿಡ್ ದೃಢಪಟ್ಟವರ ಒಟ್ಟು ಸಂಖ್ಯೆ 29,86,835ಕ್ಕೆ ಏರಿದ್ದು, 29,40,339 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಮೃತಪಟ್ಟವರ ಒಟ್ಟು ಸಂಖ್ಯೆ 38,037ರಷ್ಟಾಗಿದೆ.

ರಾಜ್ಯದಲ್ಲಿ ಸದ್ಯ 8,430 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢ ಪ್ರಮಣ ಶೇಕಡಾ 0.24ರಷ್ಟಿದ್ದು, ಸಾವಿನ ಪ್ರಮಾಣ ಶೇಕಡಾ 4.60ರಷ್ಟಿದೆ.

ಬೆಂಗಳೂರಿನಲ್ಲಿ 142 ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಕೊಡಗಿನಲ್ಲಿ 31 ಮತ್ತು ದಕ್ಷಿಣ ಕನ್ನಡದಲ್ಲಿ 28 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT