ಬುಧವಾರ, ಡಿಸೆಂಬರ್ 8, 2021
23 °C

Covid-19 Karnataka update: 264 ಹೊಸ ಪ್ರಕರಣ, 6 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 264 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. 421 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,83,133ಕ್ಕೆ ಏರಿದ್ದು, 37,937 ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಸದ್ಯ 9,508 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ದೃಢಪಡುತ್ತಿರುವ ಶೇಕಡಾವಾರು ಪ್ರಮಾಣ 0.43ರಷ್ಟಿದ್ದು, ಸಾವಿನ ದರ 2.27ರಷ್ಟಿದೆ.

ಬೆಂಗಳೂರಿನಲ್ಲಿ 121 ಹೊಸ ಪ್ರಕರಣಗಳು ದೃಢಪಟ್ಟಿದ್ದು, 3 ಸಾವಾಗಿದೆ. ನಗರದಲ್ಲಿ 6,732 ಸಕ್ರಿಯ ಪ್ರಕರಣಗಳಿವೆ.

ಉಳಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 34 ಮತ್ತು ಮೈಸೂರು ಜಿಲ್ಲೆಯಲ್ಲಿ 23 ಪ್ರಕರಣಗಳು ದೃಢಪಟ್ಟಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು