ಗುರುವಾರ , ಜೂನ್ 30, 2022
25 °C

ನೋಂದಣಿ ಕಚೇರಿ ತೆರೆಯಲು ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೋಮವಾರದಿಂದ ರಾಜ್ಯದ ಎಲ್ಲ ಜಿಲ್ಲಾ ನೋಂದಣಿ ಕಚೇರಿಗಳು ಮತ್ತು ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಅನುಮತಿ ನೀಡಿ ಭಾನುವಾರ ಆದೇಶ ಹೊರಡಿಸಲಾಗಿದೆ.

ಮೇ 10 ರಿಂದ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಾಗಿದ್ದು, ಅಂದಿನಿಂದಲೇ ನೋಂದಣಿ ಕಚೇರಿಗಳನ್ನು ಬಂದ್‌ ಮಾಡಲಾಗಿತ್ತು. ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಜಿಲ್ಲಾ ಮತ್ತು ಉಪ ನೋಂದಣಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಿ ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆಗಿರುವ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಆದೇಶ ಹೊರಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು