ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್ ಉಪತಳಿ: ಮುನ್ನೆಚ್ಚರಿಕೆಗೆ ಸೂಚನೆ

Last Updated 25 ಅಕ್ಟೋಬರ್ 2022, 15:51 IST
ಅಕ್ಷರ ಗಾತ್ರ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೊನಾ ವೈರಾಣುವಿನ ರೂಪಾಂತರಿ ಓಮೈಕ್ರಾನ್‌ನ ಉಪತಳಿಗಳು ಪತ್ತೆಯಾಗಿರುವುದರಿಂದ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ‘ಅಮೆರಿಕದಲ್ಲಿಬಿಕ್ಯೂ.1,ಮಹಾರಾಷ್ಟ್ರದಲ್ಲಿಬಿಎ 2.75 ಹಾಗೂ ಬಿಜೆ.1 ಉಪತಳಿಗಳು ಪತ್ತೆಯಾಗಿವೆ. ದೀಪಾವಳಿ, ಕನ್ನಡ ರಾಜ್ಯೋತ್ಸವ ಸೇರಿ ವಿವಿಧ ಉತ್ಸವಗಳು ನಡೆಯುವುದರಿಂದ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕೋವಿಡ್ ನಿಯಮಗಳನ್ನು ಈ ಅವಧಿಯಲ್ಲಿ ಪಾಲಿಸಬೇಕು’ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

‘ಜ್ವರ, ಕೆಮ್ಮು, ಶೀತ, ಗಂಟಲು ನೋವು, ಉಸಿರಾಟದ ಸಮಸ್ಯೆ ಕಂಡು ಬಂದಲ್ಲಿ ಕೂಡಲೇ ಆಸ್ಪತ್ರೆಗೆ ತೆರಳಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ಗುಣಮುಖವಾಗುವವರೆಗೂ ಸ್ವಯಂ ಪ್ರೇರಿತವಾಗಿ ಮನೆಯಲ್ಲಿಯೇ ಇರಬೇಕು. ಹೊರಗಡೆ ಹೋಗುವಾಗ ಮುಖಗವಸು ಧರಿಸಬೇಕು’ ಎಂದು ತಿಳಿಸಲಾಗಿದೆ.

‘ಈಗಾಗಲೇ ಎರಡು ಡೋಸ್ ಲಸಿಕೆ ಪಡೆದವರು ಇನ್ನೊಂದು ಡೋಸ್ ಲಸಿಕೆಯನ್ನು ಪಡೆದುಕೊಳ್ಳಬೇಕು. 60 ವರ್ಷ ಮೇಲ್ಪಟ್ಟವರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ರೋಗ ಲಕ್ಷಣ ಹೊಂದಿರುವವರಿಂದ ಅಂತರ ಕಾಯ್ದುಕೊಳ್ಳಬೇಕು’ ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT