ಬೆಂಗಳೂರು: ಕೋವಿಡ್ ಸೋಂಕಿತರಿಗೆ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ಚಿಕಿತ್ಸೆ ಒದಗಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ತಕ್ಷಣವೇ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಅವಕಾಶ ನೀಡಬೇಕು. ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ನಾನು ಈ ಮೂಲಕ ಆಗ್ರಹಿಸುತ್ತೇನೆ' ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯ ಅಡಿಯಲ್ಲಿ ನಾಗರಿಕರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಚಿಕಿತ್ಸೆ ಪಡೆಯಲು ಇರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಕೇಂದ್ರ ಸರ್ಕಾರ ತಕ್ಷಣವೇ ಆದೇಶ ಹೊರಡಿಸಬೇಕು ಎಂದು ನಾನು ಈ ಮೂಲಕ ಆಗ್ರಹಿಸುತ್ತೇನೆ.
— H D Kumaraswamy (@hd_kumaraswamy) May 12, 2021
1/4
'ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ. ಯೋಜನೆ ವ್ಯಾಪ್ತಿಗೆ ಕೋವಿಡ್ ಅನ್ನೂ ಸೇರಿಸುವುದು ಅಗತ್ಯವಾಗಿದೆ' ಎಂದಿದ್ದಾರೆ.
ಬಿಪಿಎಲ್ ಕಾರ್ಡುದಾರರು ಆಯುಷ್ಮಾನ್ ಭಾರತ ಯೋಜನೆ ಅಡಿ 5 ಲಕ್ಷ ರೂಪಾಯಿಗಳವರೆಗೆ ಮಾರಣಾಂತಿಕ ಕಾಯಿಲೆಗಳಿಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಎಪಿಎಲ್ ಕಾರ್ಡ್ ದಾರರಿಗೆ ಗರಿಷ್ಠ 5 ಲಕ್ಷ ರೂಪಾಯಿಗಳವರೆಗೆ ಶೇಕಡ 30ರಷ್ಟು ಚಿಕಿತ್ಸಾ ವೆಚ್ಚದಲ್ಲಿ ರಿಯಾಯಿತಿ ದಕ್ಕಲಿದೆ.
— H D Kumaraswamy (@hd_kumaraswamy) May 12, 2021
3/4
ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೊನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ? ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ ಎಂದು ಹೇಳಿದ್ದಾರೆ.
ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ?
— H D Kumaraswamy (@hd_kumaraswamy) May 12, 2021
ಕೇಂದ್ರ ಸರ್ಕಾರ ತಕ್ಷಣ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ತುರ್ತು ಅಗತ್ಯವಿದೆ. ದೇಶದ ಬಹುಸಂಖ್ಯಾತರ ಆಗ್ರಹ ಕೂಡ ಇದೇ ಆಗಿದೆ.
4/4
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.