ಮಂಗಳವಾರ, ಜೂನ್ 15, 2021
27 °C

ಕೋವಿಡ್-19: ಶಾಸಕ ರಂಗನಾಥ್ ಅವರಿಂದ ಪ್ಲಾಸ್ಮಾ ದಾನ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Coronavirus

ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿರುವ ಕುಣಿಗಲ್ ಶಾಸಕ ಡಾ. ರಂಗನಾಥ್‌ ಅವರು ತಮ್ಮ ದೇಹದ ಪ್ಲಾಸ್ಮಾವನ್ನು  ಇಬ್ಬರು ಕೊರೊನಾ ರೋಗಿಗಳಿಗೆ ದಾನ ಮಾಡಲು ನಿರ್ಧರಿಸಿದ್ದಾರೆ.

ಇದೇ 19 ರಂದು ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅವರು ಪ್ಲಾಸ್ಮಾ ದಾನ ಮಾಡಲಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾದವರ ದೇಹದ ಪ್ಲಾಸ್ಮಾವನ್ನು ಇಬ್ಬರು ಕೊರೊನಾ ರೋಗಿಗಳಿಗೆ ನೀಡಬಹುದಾಗಿದೆ. ಇದರಿಂದ ಅವರ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಈ ಮೊದಲು ರಂಗನಾಥ್ ಅವರು ಕುಣಿಗಲ್ ಕ್ಷೇತ್ರದ ಜನರಿಗೆ ಕೊರೊನಾ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಸಿ, ಡಿ ಮತ್ತು ಝಿಂಕ್  ಮಾತ್ರೆಗಳನ್ನು ಉಚಿತವಾಗಿ ಹಂಚಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು