ಭಾನುವಾರ, ಮೇ 9, 2021
26 °C

ಕೋವಿಡ್-19: ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಉತ್ಸವ, ಸಭೆ-ಸಮಾರಂಭಕ್ಕೆ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-‌19 ಪ್ರಕರಣಗಳು ಏರಿಕೆಯಾಗುತ್ತಿರುವುದನ್ನು ಪರಿಗಣಿಸಿ ಸಾರ್ವಜನಿಕ ಸ್ಥಳಗಳಲ್ಲಿ ಜಾತ್ರೆ/ಮೇಳಗಳನ್ನು ನಿರ್ಬಂಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಎಲ್ಲ ಜಿಲ್ಲಾ ಆಡಳಿತಕ್ಕೆ ಸೂಚನೆ ನೀಡಲಾಗಿದ್ದು, ರಾಜ್ಯ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್‌ ಅವರು ಪ್ರಕಟಣೆ ಹೊರಡಿಸಿದ್ದಾರೆ.

ವಿಪತ್ತು ನಿರ್ವಹಣಾ ಕಾಯ್ದೆ-2005ರ ಅಡಿಯಲ್ಲಿ ಆಯುಕ್ತರು, ಬಿಬಿಎಂಪಿ, ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಎಲ್ಲ ಪ್ರಾಧಿಕಾರಗಳಿಗೆ ಮುಂಬರುವ ಹಬ್ಬಗಳ ಸಂದರ್ಭದಲ್ಲಿ ರಾಜ್ಯದ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಧಾರ್ಮಿಕ ಉತ್ಸವಗಳು, ಸಾರ್ವಜನಿಕ ಸಮಾರಂಭ/ಸಭೆಗಳನ್ನು ನಡೆಸದಂತೆ ಖಚಿತಪಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಹಬ್ಬಗಳಿಗೆ ಸಂಬಂಧಿಸಿದಂತೆ ಜಾತ್ರೆ/ಮೇಳಗಳಲ್ಲಿ ಗುಂಪು ಸೇರುವುದನ್ನೂ ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು