ಬೆಂಗಳೂರು: ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಕಾರಣ ಮುಂಬರುವ ಯುಗಾದಿ, ಹೋಳಿ, ಷಬ್–ಎ–ಬರಾತ್, ಗುಡ್ ಫ್ರೈಡೇ ಹಬ್ಬಗಳ ಆಚರಣೆಗೆ ನಿರ್ಬಂಧ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.

ಯಾವುದೇ ಹಬ್ಬಗಳನ್ನು ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನಗಳು, ಉದ್ಯಾನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳಲ್ಲಿ ಆಚರಿಸುವಂತಿಲ್ಲ ಎಂದು ಆದೇಶ ತಿಳಿಸಿದೆ.

ಓದಿ:Covid-19 Karnataka Update: ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳ

ಈ ಸಂಬಂಧ ಬಿಬಿಎಂಪಿ ಆಯುಕ್ತರು ಮತ್ತು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮವಹಿಸಬೇಕು. ಯಾರಾದರೂ ನಿಯಮ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.