ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 19: ರಾಜ್ಯದಲ್ಲಿ ಪರೀಕ್ಷೆ, ಸೋಂಕು ಹೆಚ್ಚಳ

Last Updated 15 ಜೂನ್ 2022, 15:49 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ಪರೀಕ್ಷೆಗಳ ಹೆಚ್ಚಳದಿಂದ ಪ್ರಕರಣಗಳ ಸಂಖ್ಯೆಯೂ ಏರಿಕೆಕಂಡಿದೆ. ಬುಧವಾರ 23,452 ಪರೀಕ್ಷೆಗಳನ್ನು ಮಾಡಲಾಗಿದ್ದು, 648 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

13 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ಪತ್ತೆಯಾಗಿವೆ. ಸೋಂಕು ದೃಢ ಪ್ರಮಾಣ ಶೇ 2.76 ರಷ್ಟು ವರದಿಯಾಗಿದೆ. ಬೆಂಗಳೂರಿನಲ್ಲಿ 615 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಲ್ಲಿ ಬೆಂಗಳೂರಿನ 72 ವರ್ಷದ ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಇವರು ಉಸಿರಾಟದ ಸಮಸ್ಯೆ ಹೊಂದಿದ್ದರು.

ಸಕ್ರಿಯ ಪ್ರಕರಣಗಳ ಸಂಖ್ಯೆ 4 ಸಾವಿರದ ಗಡಿ (3,997) ಸಮೀಪಿಸಿದೆ. ಬೆಂಗಳೂರಿನಲ್ಲಿಯೇ 3,843 ಸೋಂಕಿತರು ಇದ್ದಾರೆ. ಸಕ್ರಿಯ ಪ್ರಕರಣಗಳು ಐದು ಜಿಲ್ಲೆಗಳಲ್ಲಿ ಎರಡಂಕಿ ಹಾಗೂ 15 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ.

ರಾಜ್ಯದಲ್ಲಿ ಈವರೆಗೆಕೋವಿಡ್ಪೀಡಿತರಾದವರ ಒಟ್ಟು ಸಂಖ್ಯೆ 39.57 ಲಕ್ಷ ದಾಟಿದೆ. 39.13 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ. ಕೋವಿಡ್‌ಗೆ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 40,067ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT