ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲರೂ ಒಟ್ಟಾಗಿ ಕೊರೊನಾವನ್ನು ಹಿಮ್ಮೆಟ್ಟಿಸೋಣ: ಸಿಎಂ ಯಡಿಯೂರಪ್ಪ ಮನವಿ

Last Updated 10 ಮೇ 2021, 7:22 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್-19 ಸೋಂಕು ಪ್ರಕರಣಗಳು ಗಣನೀಯವಾಗಿ ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ (ಮೇ 10) ಎರಡು ವಾರಗಳ ಕಾಲ ಲಾಕ್‌ಡೌನ್ ಹೇರಲಾಗಿದೆ. ಈ ಸಂದರ್ಭದಲ್ಲಿ ಎಲ್ಲರೂ ಒಟ್ಟಾಗಿ ಕೊರೊನಾವನ್ನು ಹಿಮ್ಮೆಟ್ಟಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಈ ನಡುವೆ ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಕೊರೊನಾ ವಿರುದ್ಧದ ಹೋರಾಟ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪ, ಕೋವಿಡ್ ಸೋಂಕು ಹರಡುವುದನ್ನು ತಡೆಯಲು ನಾವು 14 ದಿನಗಳ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಗಳನ್ನು ತಪ್ಪದೇ ಅನುಸರಿಸಿ, ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು ಸರ್ಕಾರದೊಂದಿಗೆ ಸಹಕರಿಸಿ ಎಂದು ಸಮಸ್ತ ನಾಗರಿಕರಲ್ಲಿ ಮನವಿ ಮಾಡುತ್ತೇನೆ. ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ, ನಾವು ಒಟ್ಟಾಗಿ ಕೊರೋನಾವನ್ನು ಹಿಮ್ಮೆಟ್ಟಿಸೋಣ ಎಂದು ಸಂದೇಶ ರವಾನಿಸಿದ್ದಾರೆ.

ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಇದು ಯಶಸ್ವಿಯಾಗುವುದಿಲ್ಲ. ಈನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ. ಒಟ್ಟಾಗಿ ನಾವು ಕೊರೋನಾವನ್ನು ಸೋಲಿಸೋಣ. ಸಾರ್ವಜನಿಕರು ಕೂಡ ಸೋಂಕು ನಿಯಂತ್ರಿಸಲು ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ಕೋವಿಡ್ ಸೋಂಕಿನ ಸರಪಳಿಯನ್ನು ಮುರಿಯಲು ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳನ್ನು ವಿಧಿಸಲಾಗಿದೆ. ಎಲ್ಲಾ ಸಂಸದರು ಮತ್ತು ಶಾಸಕರು ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಉಳಿದು, ಉದ್ದೇಶ ಈಡೇರುವ ನಿಟ್ಟಿನಲ್ಲಿ ಕಟ್ಟುನಿಟ್ಟಾಗಿ ನಿಯಮಗಳು ಜಾರಿಯಾಗುವುದನ್ನು ಖಚಿತಪಡಿಸಬೇಕು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT