ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18–44 ವರ್ಷ ವಯಸ್ಸಿನವರಿಗೆ ಸದ್ಯಕ್ಕಿಲ್ಲ ಕೋವಿಡ್ ಲಸಿಕೆ

Last Updated 22 ಮೇ 2021, 18:35 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಲಸಿಕೆ ಕೊರತೆ ಇರುವ ಕಾರಣ ರಾಜ್ಯದಲ್ಲಿ ಸದ್ಯಕ್ಕೆ 18ರಿಂದ 44 ವರ್ಷದವರಿಗೆ ಲಸಿಕೆ ವಿತರಿಸದಿರಲು ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಪ್ರಕಟಣೆ ಹೊರಡಿಸಿದ್ದಾರೆ. 18ರಿಂದ 44 ವರ್ಷ ವಯೋಮಾನದವರಿಗೆ ನೀಡಲು ಸದ್ಯಕ್ಕೆ ಕೋವಿಡ್ ಲಸಿಕೆ ಲಭ್ಯವಿಲ್ಲ.
ಆದರೆ, ರಾಜ್ಯದಲ್ಲಿ ಗುರುತಿಸಿರುವ ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ, ದುರ್ಬಲ ಮತ್ತು ಆದ್ಯತೆ ಗುಂಪಿನವರಿಗೆ ನಿಯೋಜಿತ ನೋಡಲ್ ಅಧಿಕಾರಿಗಳು ಲಸಿಕೆ ಪಡೆಯುವ ದಿನಾಂಕ ಮತ್ತು ಸಮಯದ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ 18ರಿಂದ 44 ವರ್ಷದವರೆಗಿನ ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಶನಿವಾರದಿಂದ ಲಸಿಕೆ ವಿತರಣೆ ಮಾಡಲು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಲಾಗಿತ್ತು. ಆದರೆ, ಈ ಬಗ್ಗೆ ಲಸಿಕೆ ವಿತರಿಸುವ ಆಸ್ಪತ್ರೆಗಳಿಗೆ ಸೂಕ್ತ ನಿರ್ದೇಶನ ನೀಡಿರದ ಕಾರಣ 45 ವರ್ಷದೊಳಗಿನ ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ವಿತರಣೆ ನಡೆಯಲಿಲ್ಲ. ಇದರಿಂದಾಗಿ ಅವರು ಲಸಿಕೆ ಕೇಂದ್ರಗಳಿಗೆ ತೆರಳಿ, ವಾಪಸ್ ತೆರಳಬೇಕಾಯಿತು.

‘ಸದ್ಯ 45 ವರ್ಷ ಮೇಲ್ಪಟ್ಟವರಿಗೆ ‘ಕೋವಿಶೀಲ್ಡ್’ ಮೊದಲ ಡೋಸ್ ನೀಡಲಾಗುವುದು. ಅರ್ಹ ಫಲಾನುಭವಿಗಳು ನಗರ ಪ್ರದೇಶಗಳಲ್ಲಿ ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳಲ್ಲಿ ನೇರವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ, ಲಸಿಕೆ ಪಡೆಯಬಹುದಾಗಿದೆ. ಎರಡನೇ ಡೋಸ್ ಪಡೆಯುವವರು ನೇರವಾಗಿ ಹತ್ತಿರದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕೋವ್ಯಾಕ್ಸಿನ್ ಮೊದಲ ಡೋಸ್ ಸದ್ಯಕ್ಕೆ ಲಭ್ಯವಿಲ್ಲ. ಎರಡನೇ ಡೋಸ್ ಪಡೆಯಬೇಕಾದ ಫಲಾನುಭವಿಗಳ ಮೊಬೈಲ್‌ಗೆ ದೂರವಾಣಿ ಸಂದೇಶ ಕಳುಹಿಸಲಾಗುತ್ತದೆ. ಅಂತಹವರು ಲಸಿಕಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ತೆರಳಿ, ಲಸಿಕೆ ಪಡೆಯಬಹುದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT