ಕೋವಿಡ್ ಲಸಿಕೆ ಕಡ್ಡಾಯವಲ್ಲ: ಆರೋಗ್ಯ ಇಲಾಖೆ

ಬೆಂಗಳೂರು: ‘ಕೋವಿಡ್ ಲಸಿಕೆಯನ್ನು ಕಡ್ಡಾಯವಾಗಿ ಎಲ್ಲರೂ ಪಡೆಯಬೇಕೆಂದಿಲ್ಲ. ಆದರೆ, ಮುನ್ನೆಚ್ಚರಿಕೆ ಕ್ರಮವಾಗಿ ಸ್ವಯಂಪ್ರೇರಿತರಾಗಿ ತೆಗೆದುಕೊಳ್ಳುವುದು ಉತ್ತಮ’ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೆಲವೇ ದಿನಗಳಲ್ಲಿ ಲಸಿಕೆ ವಿತರಣೆ ಪ್ರಾರಂಭವಾಗುವ ಕಾರಣ ರಾಜ್ಯದಲ್ಲಿಯೂ ತಾಲೀಮು ನಡೆಯುತ್ತಿದೆ. ಕೋವಿಡ್ ಲಸಿಕೆಯನ್ನು ಯಾರು ಪಡೆಯಬೇಕೆಂಬ ಜನಸಾಮಾನ್ಯರ ಗೊಂದಲಕ್ಕೆ ಇಲಾಖೆ ಉತ್ತರಿಸಿದೆ.
‘ಕೋವಿಡ್ ಲಸಿಕೆ ಪಡೆಯುವುದು ಕಡ್ಡಾಯವಲ್ಲ. ರೋಗದ ವಿರುದ್ಧ ರಕ್ಷಿಸಿಕೊಳ್ಳಲು ಹಾಗೂ ಸೋಂಕು ಬೇರೆಯವರಿಗೆ ಹರಡುವುದನ್ನು ತಡೆಯಲು ಲಸಿಕೆ ಸಹಾಯಕ. ಆದ್ದರಿಂದ ಲಸಿಕೆಯನ್ನು ಪಡೆಯುವುದು ಸೂಕ್ತ ’ ಎಂದು ಇಲಾಖೆ ವಿವರಿಸಿದೆ.
‘ಲಸಿಕೆಗಳ ಲಭ್ಯತೆಯ ಆಧಾರದ ಮೇಲೆ ಹೆಚ್ಚಿನ ಅಪಾಯದಲ್ಲಿರುವವರಿಗೆ ಮೊದಲ ಹಂತದಲ್ಲಿ ನೀಡಲಾಗುತ್ತದೆ. ಪ್ರಥಮ ಆದ್ಯತೆಯ ಗುಂಪಿನಲ್ಲಿ ಆರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ. ದ್ವಿತೀಯ ಹಂತದಲ್ಲಿ 50 ವರ್ಷ ಮೇಲ್ಪಟ್ಟವರು ಹಾಗೂ ಅಪಾಯದ ವರ್ಗದಲ್ಲಿರುವವರನ್ನು ಪರಿಗಣಿಸಲಾಗುತ್ತದೆ’ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.