ಬುಧವಾರ, ಜೂನ್ 29, 2022
26 °C

ಕೋವಿಡ್: ಆಸ್ಪತ್ರೆಯಿಂದ ಶಶಿಕಲಾ ನಾಳೆ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಪೀಡಿತರಾಗಿದ್ದ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಪ್ರಮುಖರಾದ ವಿ.ಕೆ. ಶಶಿಕಲಾ ನಟರಾಜನ್‌ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅವರು ವಿಕ್ಟೋರಿಯಾ ಆಸ್ಪತ್ರೆಯಿಂದ ಭಾನುವಾರ ಬಿಡುಗಡೆಯಾಗಲಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯ ಕಾರಣ ಜ.20ರಂದು ಅವರನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‌ಜ.21ರಂದು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಿ, ಸಿಟಿ ಸ್ಕ್ಯಾನ್‌ಗೆ ಒಳಪಡಿಸಿದ ಬಳಿಕ ಅವರು ಕೋವಿಡ್‌ ಪೀಡಿತರಾಗಿರುವುದು ದೃಢಪಟ್ಟಿತ್ತು. 10 ದಿನಗಳಿಂದ ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ.

‘ಕೋವಿಡ್‌ ಮಾರ್ಗಸೂಚಿ ಅನುಸಾರ ಅವರಿಗೆ ಚಿಕಿತ್ಸೆ ಒದಗಿಸಲಾಗಿದೆ. ಆಮ್ಲಜನಕದ ಸಂಪರ್ಕವನ್ನು ತೆಗೆಯಲಾಗಿದ್ದು, ಅವರ ರಕ್ತದಲ್ಲಿನ ಆಮ್ಲಜನಕದ ಪ್ರಮಾಣ ಸಾಮಾನ್ಯ ಸ್ಥಿತಿಗೆ ಬಂದಿದೆ. ಮಾರ್ಗಸೂಚಿ ಅನುಸಾರ 10ನೇ ದಿನದ ಚಿಕಿತ್ಸೆ ಮುಕ್ತಾಯವಾಗಿದೆ. ಅವರನ್ನು ಭಾನುವಾರ ಕಳಿಸಲಾಗುತ್ತದೆ. 14 ದಿನಗಳು ಮನೆ ಕ್ವಾರಂಟೈನ್ ಗೆ ಒಳಗಾಗಬೇಕು ' ಎಂದು ಆಸ್ಪತ್ರೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು