ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಸಿಕೆ: ಎರಡನೇ ಡೋಸ್ ನಾಳೆಯಿಂದ

Last Updated 13 ಫೆಬ್ರುವರಿ 2021, 19:26 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್‌ ಲಸಿಕೆಯ ಎರಡನೇ ಡೋಸ್ ವಿತರಣೆ ಸೋಮ ವಾರದಿಂದ ಪ್ರಾರಂಭವಾಗಲಿದೆ.

ರಾಜ್ಯದ ವಿವಿಧೆಡೆ ಲಸಿಕೆ ವಿತರಣೆಗೆ ಕಳೆದ ಜ.16ರಂದು ಚಾಲನೆ ನೀಡಲಾಗಿತ್ತು. ಅಂದು ರಾಜ್ಯದ 243 ಕೇಂದ್ರಗಳಲ್ಲಿ 13 ಸಾವಿರ ಮಂದಿ ಹಾಜರಾಗಿ, ಲಸಿಕೆ ಪಡೆದುಕೊಂಡಿದ್ದರು. ಮೊದಲ ಡೋಸ್ ಪಡೆದ 28ನೇ ದಿನಕ್ಕೆ ಎರಡನೇ ಡೋಸ್ ನೀಡುವುದಾಗಿ ಆರೋಗ್ಯ ಇಲಾಖೆ ಹೇಳಿತ್ತು. ಆದರೆ, ಕೇಂದ್ರ ಸರ್ಕಾರವು ಎರಡನೇ ಡೋಸ್ ವಿತರಣೆಗೆ ಸಂಬಂಧಿಸಿದಂತೆ ರಾಜ್ಯಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿ ರಲಿಲ್ಲ. ರಾಜ್ಯ ಸರ್ಕಾರಗಳ ಅಧಿಕಾರಿ ಗಳ ಜೊತೆಗೆ ಈ ಬಗ್ಗೆ ಶನಿವಾರ ಸಭೆ ನಡೆಸಿದ ಕೇಂದ್ರ ಸರ್ಕಾರದ ಅಧಿಕಾರಿಗಳು, ಎರಡನೇ ಡೋಸ್‌ ನೀಡಲು ಅನುಮತಿ ನೀಡಿದರು.

ರಾಜ್ಯದಲ್ಲಿ ಶನಿವಾರ 21,606 ಆರೋಗ್ಯ ಕಾರ್ಯಕರ್ತರನ್ನು ಲಸಿಕೆ ಪಡೆಯಲು ಗುರುತಿಸಲಾಗಿತ್ತು. ಅವರಲ್ಲಿ 1,231 ಮಂದಿ ಮಾತ್ರ ಹಾಜರಾಗಿದ್ದಾರೆ. ಅದೇ ರೀತಿ, ನಿಗದಿಪಡಿಸಲಾಗಿದ್ದ 30,158 ಕೋವಿಡ್‌ ಮುಂಚೂಣಿ ಯೋಧರಲ್ಲಿ 3,376 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಒಟ್ಟಾರೆ ಶೇ 9 ರಷ್ಟು ಮಂದಿ ಮಾತ್ರ ಹಾಜರಾಗಿದ್ದಾರೆ. ಉಳಿದವರು ನಾನಾ ಕಾರಣಗಳಿಂದ ಗೈರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT