ಸೋಮವಾರ, ಅಕ್ಟೋಬರ್ 26, 2020
27 °C

ಗುತ್ತಿಗೆ ಆರೋಗ್ಯ ಸಿಬ್ಬಂದಿಗೆ ಕೋವಿಡ್‌ ಹೆಚ್ಚುವರಿ ಭತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಆಯುಷ್‌ ಮತ್ತು ಎಂಬಿಬಿಎಸ್‌ ವೈದ್ಯರು, ತಜ್ಞರು, ಶುಶ್ರೂಷಕರು ಸೇರಿದಂತೆ ಆರೋಗ್ಯ ಸೇವಾ ಸಿಬ್ಬಂದಿಗೆ ರಾಜ್ಯ ಸರ್ಕಾರವು ಕೋವಿಡ್‌ ವಿಶೇಷ ಹೆಚ್ಚುವರಿ ಭತ್ಯೆ ನೀಡಲಿದೆ. ಮುಂದಿನ 6 ತಿಂಗಳು ಅವಧಿಗೆ ಮಾತ್ರ ಈ ಹೆಚ್ಚುವರಿ ಭತ್ಯೆ ನೀಡಲಾಗುತ್ತದೆ.

ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಕಾರ್ಯನಿರ್ವಹಿಸಲು 14,252 ಆರೋಗ್ಯ ಸೇವಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಹುದ್ದೆಗಳಿಗೆ ಸಿಬ್ಬಂದಿ ಸಂಖ್ಯೆ ಕಡಿಮೆ ಬಿದ್ದರೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮತಿಯೊಂದಿಗೆ ಜಿಲ್ಲಾಮಟ್ಟದ ಆಯ್ಕೆಸಮಿತಿಯು ತಾತ್ಕಾಲಿಕವಾಗಿ ಈ ಹುದ್ದೆಗಳನ್ನುತುಂಬಿಕೊಳ್ಳಬಹುದಾಗಿದೆ. 

ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಸೇವಾ ಸಿಬ್ಬಂದಿಯು ವೇತನ ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದರು. ಆದರೆ, ವೇತನ ಹೆಚ್ಚಿಸುವ ಬದಲಿಗೆ, ಕೋವಿಡ್‌ ವಿಶೇಷ ಭತ್ಯೆ ನೀಡಲು ಸರ್ಕಾರ ಮುಂದಾಗಿದೆ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು