ಸೋಮವಾರ, ಏಪ್ರಿಲ್ 12, 2021
31 °C

ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿ: ವಕೀಲರಿಗೆ ಮುಖ್ಯ ನ್ಯಾಯಮೂರ್ತಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಾರಣ ನ್ಯಾಯಾಲಯದ ಕಲಾಪಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು ವೈಯಕ್ತಿಕವಾಗಿ ಮನವಿ ಮಾಡಿದರು. ನ್ಯಾಯಾಲಯಗಳಲ್ಲಿರುವ 45 ವರ್ಷಕ್ಕೂ ಮೇಲ್ಪಟ್ಟ ಎಲ್ಲ ಸಿಬ್ಬಂದಿಯೂ ಕೂಡಲೇ ಕೋವಿಡ್ ಲಸಿಕೆ ಪಡೆದುಕೊಳ್ಳುವಂತೆ ತಿಳಿಸಿದರು.

ವಕೀಲರು ಕೋವಿಡ್‌ಗೆ ತುತ್ತಾಗಿರುವ ಕಾರಣದಿಂದ ಕಳೆದ ಕೆಲ ದಿನಗಳಲ್ಲಿ ಹಲವು ವಿಚಾರಣೆಗಳನ್ನು ಮುಂದೂಡಿದ್ದನ್ನು ಗಮನದಲ್ಲಿಟ್ಟುಕೊಂಡು ನ್ಯಾಯಮೂರ್ತಿ ಅವರು ಮೌಖಿಕವಾಗಿ ಈ ಮನವಿ ಮಾಡಿದರು.

‘ಬೆಂಗಳೂರಿನ ಪ್ರಧಾನ ಪೀಠದ ಮೊದಲ 10 ನ್ಯಾಯಾಲಯಗಳಲ್ಲಿ ಈಗಾಗಲೇ ಗುಣಮಟ್ಟದ ಧ್ವನಿವರ್ಧಕಗಳನ್ನು ಅಳವಡಿಸಲಾಗಿದೆ. ಉಳಿದ ಎಲ್ಲ ನ್ಯಾಯಾಲಯದ ಸಭಾಂಗಣಗಳಲ್ಲೂ ಇದೇ ವ್ಯವಸ್ಥೆ ಕಲ್ಪಿಸಲಾಗುವುದು. ಕರ್ನಾಟಕ ಹೈಕೋರ್ಟ್‌ನಲ್ಲಿ ಅಳವಡಿಸಿಕೊಂಡಿರುವ ಮಾದರಿಯನ್ನು ಬೇರೆ ಹೈಕೋರ್ಟ್‌ಗಳಲ್ಲೂ ಅನುಸರಿಸಲು ಸಲಹೆ ಪಡೆಯುತ್ತಿವೆ’ ಎಂದು ಹೇಳಿದರು.

‘ನ್ಯಾಯಾಲಯಕ್ಕೆ ಹಾಜರಾಗದೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಇನ್ನೂ ಪರಿಣಾಮಕಾರಿಯಾಗಿ ವಕೀಲರು ವಾದ ಮಾಡಲು ಸಾಧ್ಯವಿದೆ’ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಅವರೂ ಅಭಿಪ್ರಾಯಪಟ್ಟರು.

‘ಸಾರ್ವಜನಿಕರು, ದಾವೆ ಹೂಡುವವರು, ವಕೀಲರು ನಿಯಮಿತವಾಗಿ ನ್ಯಾಯಾಲಯ ಮತ್ತು ಕಚೇರಿಗಳಿಗೆ ಭೇಟಿ ನೀಡುತ್ತಿದ್ದಾರೆ. ಹೀಗಾಗಿ, ಎಲ್ಲ ಅರ್ಹ ಸಿಬ್ಬಂದಿ ಲಸಿಕೆ ಪಡೆದುಕೊಳ್ಳುವುದು ಅಗತ್ಯ’ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು