ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 2,136 ಮಂದಿಗೆ ಕೋವಿಡ್: ಪ್ರಕರಣಗಳಲ್ಲಿ ಏರುಗತಿ

Last Updated 3 ಆಗಸ್ಟ್ 2022, 16:16 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಬುಧವಾರ 2,136 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ.

ಒಂದು ದಿನದ ಅವಧಿಯಲ್ಲಿ 32,399 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಂಕು ದೃಢ ಪ್ರಮಾಣ ಶೇ 6.59 ರಷ್ಟು ವರದಿಯಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 1,584 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಧಾರವಾಡದಲ್ಲಿ 78 ಹಾಗೂ ಮೈಸೂರಿನಲ್ಲಿ 71 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ 50ಕ್ಕಿಂತ ಕಡಿಮೆಯಿವೆ.

ಕೋವಿಡ್ ಪೀಡಿತರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 62 ವರ್ಷದ ವ್ಯಕ್ತಿ ಹಾಗೂ ಬಳ್ಳಾರಿಯಲ್ಲಿ 54 ವರ್ಷದ ಮಹಿಳೆ ಸಾವಿಗೀಡಾಗಿದ್ದಾರೆ. ಸೋಂಕಿತರಲ್ಲಿ 1,845 ಮಂದಿ ಹೊಸದಾಗಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,185ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 8,464 ಮಂದಿ ಸೋಂಕಿತರಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 40.12 ಲಕ್ಷಕ್ಕೆ ತಲುಪಿದೆ. ಸೋಂಕಿತರಲ್ಲಿ 39.61 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಮೃತರ ಸಂಖ್ಯೆ 40,108ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT