ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: 5 ಪ್ರಕರಣಗಳು ದೃಢಪಟ್ಟರೆ ಕ್ಲಸ್ಟರ್

Last Updated 19 ಜನವರಿ 2022, 17:15 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ನ ಐದು ಅಥವಾ ಅದಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗುವ ಸ್ಥಳವನ್ನು ಕ್ಲಸ್ಟರ್ ಎಂದು, 15 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ದೃಢಪಡುವ ಪ್ರದೇಶವನ್ನು ದೊಡ್ಡ ಕ್ಲಸ್ಟರ್ ಎಂದು ಪರಿಗಣಿಸುವಂತೆ ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ.

ಈ ಬಗ್ಗೆ ಇಲಾಖೆಯ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ವೇಗವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಹೀಗಾಗಿ,ಒಂದು ಅಥವಾ ಅದಕ್ಕಿಂತ ಹೆಚ್ಚು ಮನೆಗಳಲ್ಲಿ ಪ್ರಕರಣಗಳು ವರದಿಯಾದಲ್ಲಿ, ಸದರಿ ಸಾಲಿನಲ್ಲಿರುವ ಎಲ್ಲ ಮನೆಗಳು ಅಥವಾ 50 ಮೀಟರ್ ವ್ಯಾಪ್ತಿಯಲ್ಲಿರುವ ಮನೆಗಳಿಗೆ ನಿರ್ಬಂಧ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಹೇಳಲಾಗಿದೆ.

ಅಪಾರ್ಟ್‌ಮೆಂಟ್ವಸತಿ ಸಮುಚ್ಛಯಗಳಲ್ಲಿ ಪ್ರಕರಣಗಳು ವರದಿಯಾದಲ್ಲಿ ಆಯಾ ಮಹಡಿಗಳಿಗೆ ನಿರ್ಬಂಧ ವಿಧಿಸಬೇಕು. ಇಂತಹ ಪ್ರದೇಶವನ್ನು ಮೈಕ್ರೊಕಂಟೈನ್ಮೆಂಟ್ ವಲಯವೆಂದು ಘೋಷಿಸಬೇಕು. ಪ್ರಕರಣಗಳು ದೃಢಪಟ್ಟ ಏಳು ದಿನಗಳ ಬಳಿಕ ಹೊಸದಾಗಿ ಪ್ರಕರಣಗಳು ಪತ್ತೆಯಾಗದಿದ್ದರೆ ನಿರ್ಬಂಧಗಳನ್ನು ತೆರವು ಮಾಡಬಹುದು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT