ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನುದಾನಿತ ಶಾಲಾ ಶಿಕ್ಷಕರಿಗೂ ಕೋವಿಡ್‌ ಪರಿಹಾರ

Last Updated 30 ಏಪ್ರಿಲ್ 2021, 21:12 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ನಿಯಂತ್ರಣ ಸಂಬಂಧ ಕರ್ತವ್ಯದಲ್ಲಿ ಪಾಲ್ಗೊಂಡು ಸೋಂಕು ತಗುಲಿ ಮೃತರಾಗುವ ಅನುದಾನಿತ ಶಾಲಾ ಶಿಕ್ಷಕರ ಕುಟುಂಬಗಳಿಗೂ ತಲಾ ₹ 30 ಲಕ್ಷ ಮೊತ್ತದ ಪರಿಹಾರ ವಿತರಿಸುವ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಸರ್ಕಾರದ ಎಲ್ಲ ಇಲಾಖೆಗಳ ನೌಕರರು ಕೋವಿಡ್‌ ನಿಯಂತ್ರಣ ಕರ್ತವ್ಯದಲ್ಲಿ ಭಾಗಿಯಾಗಿ ಮೃತರಾದರೆ ಅವರ ಕುಟುಂಬಗಳಿಗೆ ತಲಾ ₹ 30 ಲಕ್ಷ ಪರಿಹಾರ ವಿತರಿಸುವ ಸಂಬಂಧ 2020ರ ಆಗಸ್ಟ್‌ 7ರಂದು ಆದೇಶ ಹೊರಡಿಸಲಾಗಿತ್ತು. ಈ ಸೌಲಭ್ಯವನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.

ಇಲಾಖಾ ಮುಖ್ಯಸ್ಥರು, ಜಿಲ್ಲಾಧಿಕಾರಿ ಅಥವಾ ಬಿಬಿಎಂಪಿ ಆಯುಕ್ತರು ಅನುದಾನಿತ ಶಾಲಾ ಶಿಕ್ಷಕರನ್ನು ಕೋವಿಡ್‌ ನಿಯಂತ್ರಣ ಸಂಬಂಧಿ ಕರ್ತವ್ಯಕ್ಕೆ ನಿಯೋಜಿಸಿದ ಆದೇಶದ ಪ್ರತಿ ಇದ್ದರೆ ಪರಿಹಾರ ವಿತರಣೆಗೆ ಪರಿಗಣಿಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT