ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿಯಂತ್ರಣ: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಭೆ

Last Updated 16 ಜನವರಿ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸೋಮವಾರ ಉನ್ನತಮಟ್ಟದ ಸಭೆ ನಡೆಯಲಿದೆ.

ಮುಖ್ಯಮಂತ್ರಿಯವರಿಗೂ ಕೋವಿಡ್‌ ತಗುಲಿರುವುದರಿಂದ ಅವರು ಪ್ರತ್ಯೇಕ ವಾಸದಲ್ಲಿದ್ದಾರೆ. ಈ ಕಾರಣದಿಂದ ವರ್ಚ್ಯುಯಲ್‌ ಆಗಿ ಸಭೆ ನಡೆಯಲಿದೆ. ಕಂದಾಯ ಸಚಿವ ಆರ್‌. ಅಶೋಕ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಸೇರಿದಂತೆ ಕೆಲವು ಸಚಿವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವರು.

ಕೋವಿಡ್‌ ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿರುವ ಮಾರ್ಗಸೂಚಿಯ ಅವಧಿ ಬುಧವಾರಕ್ಕೆ ಅಂತ್ಯಗೊಳ್ಳಲಿದೆ. ಮುಂದಿನ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಕೋವಿಡ್‌ ದೃಢಪ್ರಮಾಣ ದರ ಹೆಚ್ಚುತ್ತಿರುವುದರಿಂದ ಮತ್ತಷ್ಟು ಬಿಗಿ ಕ್ರಮಗಳ ಜಾರಿ ಕುರಿತು ಚರ್ಚಿಸಿ, ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT