ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ನಿರ್ವಹಣೆಗೆ ಎಚ್‌ಡಿಕೆ 10 ಸೂತ್ರ

Last Updated 8 ಮೇ 2021, 19:43 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆರೋಗ್ಯ ವ್ಯವಸ್ಥೆ, ಸರ್ಕಾರದ ಮೇಲೆ ತಡೆಯಲಾರದ ಒತ್ತಡ ಸೃಷ್ಟಿಯಾಗುತ್ತಿದೆ. ಈ ಕಾರಣಕ್ಕೆ ತಜ್ಞರು, ವೈದ್ಯರು, ಸಲಹೆಗಾರರ ಜೊತೆ ಚರ್ಚಿದ ಜೆಡಿಎಸ್‌ ಶಾಸಕಾಂಗಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಹತ್ತು ಸಲಹೆಗಳನ್ನು ನೀಡಿದ್ದಾರೆ.

‘ಪ್ರತಿ ವಾರ್ಡ್‌, ಗ್ರಾಮ ಪಂಚಾಯಿತಿ ಮಟ್ಟದಲ್ಲಿ 3-4 ಫೀವರ್‌ ಕ್ಲಿನಿಕ್‌ಗಳನ್ನು ಆರಂಭಿಸಿದರೆ ಆಸ್ಪತ್ರೆಗಳ ಮೇಲಿನ ಒತ್ತಡವನ್ನು ನಿಯಂತ್ರಿಸಬಹುದು. ಸಿಬ್ಬಂದಿ ಕೊರತೆ ನೀಗಿಸಲು ಆಸ್ಪತ್ರೆಗಳು ಮತ್ತು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ವೈದ್ಯಕೀಯೇತರ ಬೋಧನಾ ಸಿಬ್ಬಂದಿ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಿಬ್ಬಂದಿಯನ್ನು ನಿಯೋಜಿಸಬಹುದು. ಕಡಿಮೆ ರೋಗಲಕ್ಷಣಗಳಿರುವ ಸೋಂಕಿತರಿಗೆ ಆಯುಷ್‌ ಕಾಲೇಜುಗಳು ಮತ್ತು ಆಸ್ಪತ್ರೆಗಳು ಚಿಕಿತ್ಸೆ ನೀಡಬೇಕು’ ಎಂದು ಅವರು ಹೇಳಿದ್ದಾರೆ.

‘ವೈದ್ಯಕೀಯ ಕಾಲೇಜು, ಆಸ್ಪತ್ರೆಗಳು, ಹೋಟೆಲ್‌ಗಳನ್ನು ರೋಗಲಕ್ಷಣ ರಹಿತರ ಆರೈಕೆಮತ್ತು ನಿಗಾ ಕೇಂದ್ರಗಳಾಗಿ ಪರಿವರ್ತಿಸಬೇಕು. ಗಂಭೀರ ಸಮಸ್ಯೆ ಎದುರಿಸುತ್ತಿರುವವರಿಗೆ ಮಾತ್ರಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಬೇಕು. ವಾರ್ಡ್‌, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ಕ್ಲಿನಿಕ್‌ಗಳು ಮತ್ತು ಆರೋಗ್ಯ ಸಿಬ್ಬಂದಿ ಮಾತ್ರಹಾಸಿಗೆ ನೀಡುವಂತೆ ವಾರ್‌ ರೂಂಗಳಿಗೆ ಶಿಫಾರಸುಮಾಡಬೇಕು. ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು ಐಎಎಸ್‌ಮತ್ತು ಕೆಎಎಸ್‌ ಶ್ರೇಣಿಯ ಅಧಿಕಾರಿಗಳನ್ನು ನೇಮಿಸಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.

‘ನಿರ್ದಿಷ್ಟ ಆಸ್ಪತ್ರೆಗೆ ನಿಯೋಜಿಸಲಾದ ಅಧಿಕಾರಿಯುನಿತ್ಯ ತನ್ನ ಜವಾಬ್ದಾರಿಯ ಆಸ್ಪತ್ರೆಗೆ ಕಡ್ಡಾಯವಾಗಿ ಭೇಟಿ ನೀಡುವಂತೆ ತಾಕೀತು ಮಾಡಬೇಕು.ಆರೋಗ್ಯ ವ್ಯವಸ್ಥೆಯ ನೆರವಿಗೆ ಬರುವಂತೆಯುವಕರಿಗೆ, ಸ್ವಯಂಸೇವಕರಿಗೆ ಸರ್ಕಾರ ಕರೆ ನೀಡಬೇಕು. ಫೀವರ್‌ ಕ್ಲಿನಿಕ್‌ಗಳ ಹಂತದಲ್ಲಿಯೂ ಲಸಿಕೆ ಲಭ್ಯವಾಗುವಂತೆ ಮಾಡಬೇಕು. ಅಲ್ಲದೆ, ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಸಿಬ್ಬಂದಿಯಲ್ಲಿ ಅರ್ಹರನ್ನು ಸರ್ಕಾರ ತಕ್ಷಣ ಕಾಯಂಗೊಳಿಸಬೇಕು ಎಂದೂ ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT