ಸೋಮವಾರ, ಅಕ್ಟೋಬರ್ 18, 2021
27 °C

Covid-19 Karnataka Update: 310 ಹೊಸ ಪ್ರಕರಣ, 6 ಸೋಂಕಿತರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 310 ಹೊಸ ಪ್ರಕರಣಗಳು ವರದಿಯಾಗಿದ್ದು, 6 ಸೋಂಕಿತರು ಮೃತಪಟ್ಟಿದ್ದಾರೆ. 

ಈ ವರೆಗೂ ರಾಜ್ಯದಲ್ಲಿ ಒಟ್ಟು 29,82,399 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 29,34,870 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ರಾಜ್ಯದಲ್ಲಿ ಒಂದೇ ದಿನ 347 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಈಗಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,578 ಆಗಿದೆ.

ಇಲ್ಲಿಯವರೆಗೂ ಕೋವಿಡ್‌ನಿಂದ ಒಟ್ಟು 37,922 ಮಂದಿ ಮೃತಪಟ್ಟಿದ್ದಾರೆ. 

ಬೆಂಗಳೂರಿನಲ್ಲಿ 148, ದಕ್ಷಿಣ ಕನ್ನಡದಲ್ಲಿ 40, ಮೈಸೂರಿನಲ್ಲಿ 27 ಹೊಸ ಪ್ರಕರಣಗಳು ವರದಿಯಾಗಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು