ಬೆಂಗಳೂರು: ಕೋವಿಡ್ ಅನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಹೊರಡಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧಗಳು ವ್ಯಕ್ತವಾಗಿವೆ.

ಇದಕ್ಕೆ ಪ್ರತಿಕ್ರಿಯಿಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, 'ಕಳೆದ ವರ್ಷದ ಲಾಕ್ಡೌನ್ ಮತ್ತು ನಂತರದ ನಿರ್ಬಂಧಗಳಿಂದ ಚಿತ್ರರಂಗ ಸೇರಿದಂತೆ ಅನೇಕ ಉದ್ದಿಮೆ, ವ್ಯಾಪಾರ, ವಹಿವಾಟುಗಳಿಗೆ ತೊಂದರೆ ಆಗಿರುವುದರ ಬಗ್ಗೆ ಸರ್ಕಾರಕ್ಕೆ ಅರಿವಿದೆ, ಕಳಕಳಿಯೂ ಇದೆ. ಆದರೆ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಮತ್ತೆ ಎದುರಾಗಿದೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

'ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೆಲ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ' ಎಂದು ಸುಧಾಕರ್ ಹೇಳಿದ್ದಾರೆ.

'ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸದಸ್ಯರು, ತಾಂತ್ರಿಕ ಸಲಹಾ ಸಮಿತಿಯ ತಜ್ಞರು, ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಎಲ್ಲಾ ಆಯಾಮಗಳನ್ನು ಪರಿಗಣಿಸಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ' ಎಂದು ಆರೋಗ್ಯ ಸಚಿವರು ಸಮಜಾಯಿಷಿ ನೀಡಿದ್ದಾರೆ.

'ಈಗ ಲಸಿಕೆ ಸಹ ಲಭ್ಯವಿರುವುದರಿಂದ ಹೆಚ್ಚು ಮಂದಿ ಲಸಿಕೆ ಪಡೆದು, ಕೆಲವು ದಿನಗಳ ಕಾಲ ಕಠಿಣ ನಿಯಮಗಳನ್ನು ಪಾಲಿಸಿಬೇಕು. ನಿಮ್ಮೆಲ್ಲರ ಸಹಕಾರದಿಂದ ಪ್ರಕರಣಗಳು ಕಡಿಮೆಯಾದರೆ ಮತ್ತೆ ಎಂದಿನಂತೆ ಪೂರ್ಣ ಪ್ರಮಾಣದಲ್ಲಿ ಚಟುವಟಿಕೆಗಳನ್ನು ಪುನರಾರಂಭಿಸಬಹುದು' ಎಂದು ಸುಧಾಕರ್ ಟ್ವೀಟಿಸಿದ್ದಾರೆ.

'ಈ ನಿರ್ಧಾರ ವೈಜ್ಞಾನಿಕ ನೆಲೆಗಟ್ಟಿಯಲ್ಲಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಆಡಳಿತಾತ್ಮಕ ನಿರ್ಧಾರವಾಗಿದೆ. ಇದನ್ನು ರಾಜಕೀಯ ಅಥವಾ ಇನ್ಯಾವುದೇ ದೃಷ್ಟಿಯಿಂದ ಪರಿಗಣಿಸಬಾರದು' ಎಂದು ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.