ಬೆಂಗಳೂರು: ರಾಜ್ಯದಲ್ಲಿ 1,875 ಮಂದಿ ಕೋವಿಡ್ ಪೀಡಿತರಾಗಿರುವುದು ಭಾನುವಾರ ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 24,144ಕ್ಕೆ ಏರಿಕೆಯಾಗಿದೆ.

ಕಳೆದೊಂದು ವಾರದಿಂದ ಗುಣಮುಖರ ಸಂಖ್ಯೆಗಿಂತ ಹೊಸ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗುತ್ತಿವೆ. ಇದರಿಂದ ಸಕ್ರಿಯ ಪ್ರಕರಣ ಹೆಚ್ಚಳವಾಗಿದೆ. ಒಂದು ದಿನದ ಅವಧಿಯಲ್ಲಿ 1.55 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಶೇ 1.20ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ.

ರಾಜ್ಯದ 16 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ ಹಾಗೂ 8 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆಯಲ್ಲಿ ಹೊಸದಾಗಿ ಪ್ರಕರಣ ವರದಿಯಾಗಿಲ್ಲ. ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 410, ಮೈಸೂರಿನಲ್ಲಿ 146 ಹಾಗೂ ಕೊಡಗಿನಲ್ಲಿ 83 ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ 409 ಮಂದಿ ಸೋಂಕಿತರಾಗಿದ್ದಾರೆ. ಉಡುಪಿಯಲ್ಲಿ 162 ಹಾಗೂ ಹಾಸನದಲ್ಲಿ 108 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 100ರ ಗಡಿಯೊಳಗೆ ವರದಿಯಾಗಿವೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 29.06 ಲಕ್ಷ ದಾಟಿದೆ. ಕೊರೊನಾ ಸೋಂಕಿತರಲ್ಲಿ 1,502 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 28.46 ಲಕ್ಷ ದಾಟಿದೆ.

ಕೋವಿಡ್ ಪೀಡಿತರಲ್ಲಿ 25 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 9 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 8, ದಕ್ಷಿಣ ಕನ್ನಡದಲ್ಲಿ 6, ಹಾಸನದಲ್ಲಿ 3, ಕೋಲಾರ ಹಾಗೂ ಉತ್ತರ ಕನ್ನಡದಲ್ಲಿ ತಲಾ ಇಬ್ಬರು ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಮರಣ ಪ್ರಮಾಣ ದರವು ಶೇ 1.33ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್ನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 36,587ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.