ಬೆಂಗಳೂರು: ಕೋವಿಡ್ ದೃಢಪ್ರಮಾಣ ದರ ಶೇಕಡ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಸಂಜೆ ನಡೆದ ಉನ್ನತಮಟ್ಟದ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ಕೋವಿಡ್ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಸದ್ಯ ತರಗತಿಗಳನ್ನು ಆರಂಭಿಸುವುದಿಲ್ಲ. ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭಿಸಲಾಗುವುದು' ಎಂದರು.

ಶಿಕ್ಷಕರು ಮತ್ತು ಪೋಷಕರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಮಕ್ಕಳಲ್ಲಿ ಸೋಂಕು ಪತ್ತೆಯಾದರೆ ಶಾಲೆಗಳನ್ನು ಒಂದು ವಾರ ಬಂದ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು ಎಂದರು.

ಅಂತರ ರಾಜ್ಯ ಗಡಿ ಭಾಗದ ಜಿಲ್ಲೆಗಳಲ್ಲಿನ ಗಡಿ ತಾಲ್ಲೂಕುಗಳಲ್ಲಿ ಹೆಚ್ಚು ನಿಗಾ ವಹಿಸಲಾಗುವುದು. ಸ್ಥಳೀಯವಾಗಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಇದೇ 23ರಿಂದ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸುವ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಆದರೆ, ಸೋಂಕು ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರವೇ ತರಗತಿ ಆರಂಭಿಸಲು ಒಪ್ಪಿಗೆ ನೀಡಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.