ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 24 ಗಂಟೆಗಳಲ್ಲಿ 10,959 ಹೊಸ ಪ್ರಕರಣ, 192 ಸಾವು

Last Updated 9 ಜೂನ್ 2021, 15:26 IST
ಅಕ್ಷರ ಗಾತ್ರ

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಾದ್ಯಂತ 10,959 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 192 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವರೆಗೂ ಕರ್ನಾಟಕದಲ್ಲಿ 27,28,248 ಪ್ರಕರಣಗಳು ದಾಖಲಾಗಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 32,291ಕ್ಕೆ ತಲುಪಿದೆ.

ಇಂದು 20,246 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.

ರಾಜ್ಯದಲ್ಲಿ ಒಟ್ಟು 2,15,525 ಸಕ್ರಿಯ ಪ್ರಕರಣಗಳಿದ್ದು, ಈ ವರೆಗೆ 24,80,411 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.


ಬೆಂಗಳೂರು ನಗರದಲ್ಲಿ ಇಂದು 2,395 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, 50 ಮಂದಿ ಸಾವಿಗೀಡಾಗಿದ್ದಾರೆ.

ತುಮಕೂರು 662, ಮೈಸೂರಿನಲ್ಲಿ 1,163, ಉಡುಪಿಯಲ್ಲಿ 413, ದಕ್ಷಿಣ ಕನ್ನಡದಲ್ಲಿ 594 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT