ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: 98 ಸಾವಿರಕ್ಕೆ ಪರೀಕ್ಷೆ ಇಳಿಕೆ

Last Updated 4 ಡಿಸೆಂಬರ್ 2020, 19:08 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯು ರಾಜ್ಯದಲ್ಲಿ ಪ್ರತಿನಿತ್ಯ ಸರಾಸರಿ 1.25 ಲಕ್ಷ ಪರೀಕ್ಷೆಗಳನ್ನು ನಡೆಸಬೇಕೆಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಆದರೆ, ಲಕ್ಷ ದಾಟುತ್ತಿದ್ದ ಕೋವಿಡ್ ಪರೀಕ್ಷೆಗಳ ಸಂಖ್ಯೆ ಶುಕ್ರವಾರ 98 ಸಾವಿರಕ್ಕೆ ಇಳಿಕೆಯಾಗಿದೆ.

ರಾಜ್ಯದಲ್ಲಿ ಹೊಸದಾಗಿ 1,247 ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.90 ಲಕ್ಷಕ್ಕೆ ಮುಟ್ಟಿದೆ. ಈ ತಿಂಗಳು ನಾಲ್ಕು ದಿನಗಳ ಅವಧಿಯಲ್ಲಿ 5,463 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 1,365 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಲ್ಲಿ ಮತ್ತೆ 13 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,834ಕ್ಕೆ ತಲುಪಿದೆ.

ಕೋವಿಡ್ ಪೀಡಿತರಲ್ಲಿ ರಾಜ್ಯದಲ್ಲಿ 877 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 8.53 ಲಕ್ಷ ದಾಟಿದೆ. ಸೋಂಕಿತರಲ್ಲಿ ಸದ್ಯ 25,046 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರಲ್ಲಿ 287 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ರಾಜ್ಯದ ಜ್ವರ ಚಿಕಿತ್ಸಾಲಯಗಳಲ್ಲಿ ಈವರೆಗೆ 31.46 ಲಕ್ಷ ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ 620 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.72 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 74 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 50,922ಕ್ಕೆ ತಲುಪಿದೆ. ತುಮಕೂರು (73), ಮಂಡ್ಯ (53), ಹಾಸನ (49) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT