ಬುಧವಾರ, ಸೆಪ್ಟೆಂಬರ್ 29, 2021
20 °C

ಕೋವಿಡ್: ಎಚ್ಚರ ವಹಿಸಲು ಅರೋಗ್ಯ ಇಲಾಖೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸುವ ಜತೆಗೆ, ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. 

ನೆರೆಯ ರಾಜ್ಯ ಕೇರಳದಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ಹೀಗಾಗಿ, ರಾಜ್ಯದಲ್ಲಿ ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಜ್ಞರು ಸೂಚಿಸಿದ್ದಾರೆ. ಜನರು ಮುಖಗವಸು ಧರಿಸುವಿಕೆ ಸೇರಿದಂತೆ ವಿವಿಧ ನಿಯಮಗಳನ್ನು ಪಾಲಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಇಲಾಖೆ ಮನವಿ ಮಾಡಿಕೊಂಡಿದೆ.

‘ಅನಿವಾರ್ಯ ಇಲ್ಲದಿದ್ದಲ್ಲಿ ಹಿರಿಯ ನಾಗರಿಕರು ಮನೆಯಿಂದ ಹೊರಗಡೆ ಹೋಗಬಾರದು. ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗಳಿದ್ದರೆ ತಪ್ಪದೇ ಔಷಧಗಳನ್ನು ಮುಂದುವರಿಸಬೇಕು. ಯಾವುದೇ ಅನಾರೋಗ್ಯ ಸಮಸ್ಯೆಗಳ ಲಕ್ಷಣಗಳು ಗೋಚರಿಸಿದಲ್ಲಿ ತಡಮಾಡದೆಯೇ ವೈದ್ಯರನ್ನು ಭೇಟಿ ಮಾಡಬೇಕು. ಊಹಾಪೋಹಗಳಿಗೆ ತಲೆಕೆಡಿಸಿಕೊಳ್ಳಬಾರದು’ ಎಂದು ತಿಳಿಸಿದೆ.

‘ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಪೌಷ್ಟಿಕ ಆಹಾರವನ್ನು ಸೇವಿಸಬೇಕು. ಕೈಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಹೊರಗಡೆ ತೆರಳಿದಾಗ ಮುಖ, ಮೂಗು, ಬಾಯಿ ಹಾಗೂ ಕಣ್ಣುಗಳನ್ನು ಮುಟ್ಟಿಕೊಳ್ಳಬಾರದು’ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು