ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಪರಿಹಾರದ ವಿಚಾರವಾಗಿ ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಲಿ: ಸಿದ್ದರಾಮಯ್ಯ

Last Updated 27 ಮಾರ್ಚ್ 2021, 6:45 IST
ಅಕ್ಷರ ಗಾತ್ರ

ಬೆಂಗಳೂರು: 'ಕೊರೊನಾ ಸೋಂಕು, ಸಾವು, ಚಿಕಿತ್ಸೆ ಮತ್ತು ನೊಂದ ಕುಟುಂಬಗಳಿಗೆ ನೀಡಿರುವ ಪರಿಹಾರದ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರ ತಕ್ಷಣ ಶ್ವೇತಪತ್ರ ಹೊರಡಿಸಿ ನಿಜ ಸಂಗತಿಯನ್ನು ಜನತೆಗೆ ತಿಳಿಸಬೇಕು' ಎಂದು ವಿಧಾನ ಸಭೆ ವಿರೋಧ ಒಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, 'ಕೊರೊನಾವನ್ನು ಔಷಧಿ-ಚಿಕಿತ್ಸೆಯಿಂದ ಗೆಲ್ಲಬೇಕೇ ಹೊರತು ಸುಳ್ಳುಗಳಿಂದಲ್ಲ' ಎಂದು ಕುಟುಕಿದ್ದಾರೆ.

'ಸುಳ್ಳು ಹೇಳಿರುವುದು ಕೊರೊನಾ ಸಾವಿನ ಬಗ್ಗೆ ಮಾತ್ರ ಅಲ್ಲ, ಔಷಧಿ, ಮಾಸ್ಕ್, ಸ್ಯಾನಿಟೈಸರ್ ಪಿಪಿ ಕಿಟ್ ಗಳಿಂದ ಹಿಡಿದು ಆಸ್ಪತ್ರೆಗಳ ಹಾಸಿಗೆ ಖರೀದಿ ವರೆಗೆ ಎಲ್ಲದರಲ್ಲಿಯೂ ನಡೆದಿರುವ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ಸುಳ್ಳು ಹೇಳುತ್ತಲೇ ಇದ್ದಾರೆ'.

'ಕೊರೊನಾ ಉಲ್ಭಣಕ್ಕೆಬಿಜೆಪಿ ಸರ್ಕಾರದ ಅಸಾಮರ್ಥ್ಯ, ಭ್ರಷ್ಟಾಚಾರ ಹಾಗೂ ಸುಳ್ಳುಗಳು ಕಾರಣ ಎಂದು ಮೊದಲ ದಿನದಿಂದ ಹೇಳುತ್ತಾ ಬಂದಿದ್ದೇನೆ. ತಪ್ಪನ್ನು ತಿದ್ದಿಕೊಳ್ಳದೆ ಎಲ್ಲವನ್ನು ಸಮರ್ಥಿಸಿಕೊಂಡ ಸರ್ಕಾರದ ಲಜ್ಜೆಗೇಡಿತನದ ಫಲವನ್ನು ರಾಜ್ಯದ ಜನ ಅನುಭವಿಸಬೇಕಾಗಿದೆ'.

'ರಾಜ್ಯದ ಆರೋಗ್ಯ ಇಲಾಖೆ ದಾಖಲೆ ಪ್ರಕಾರ 2020ರ ಡಿಸೆಂಬರ್ ವರೆಗಿನ ಕೊರೊನಾ ಸಾವಿನ ಸಂಖ್ಯೆ- 12,090. ರಾಜ್ಯ ಯೋಜನಾ ಮತ್ತು ಅಂಕಿಅಂಶ ಇಲಾಖೆಯ ಪ್ರಕಾರ ಇದೇ ಅವಧಿಯಲ್ಲಿ ಕೊರೊನಾ ಸಾವಿನ ಸಂಖ್ಯೆ- 22,320.ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರೇ ಇದರಲ್ಲಿ ಯಾವುದು ಸತ್ಯ, ಯಾವುದು ಸುಳ್ಳು' ಎಂದೂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT