ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 1,102 ಹೊಸ ಪ್ರಕರಣ, 17 ಸೋಂಕಿತರ ಸಾವು

Last Updated 8 ಸೆಪ್ಟೆಂಬರ್ 2021, 14:19 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 1,102 ಹೊಸ ಪ್ರಕರಣಗಳು ವರದಿಯಾಗಿದ್ದು, 17 ಸೋಂಕಿತರು ಮೃತಪಟ್ಟಿದ್ದಾರೆ.

ಈ ವರೆಗೂ ರಾಜ್ಯದಲ್ಲಿ ಒಟ್ಟು 29,58,090 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 29,03,547 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಒಂದೇ ದಿನ 1,458 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ಈಗಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 17,058 ಆಗಿದೆ.

ಇಲ್ಲಿವರೆಗೂ ಕೋವಿಡ್‌ನಿಂದ ಒಟ್ಟು 37,458 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ(338), ದಕ್ಷಿಣ ಕನ್ನಡ(200), ಮೈಸೂರು(64), ಉಡುಪಿ(133), ತುಮಕೂರು(31) ಹೊಸ ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆಗಳಲ್ಲಿ ಗದಗ, ಬೀದರ್‌, ಯಾದಗಿರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣಗಳು ಬೆಳಕಿಗೆ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT