ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಇಂದು 4,373 ಹೊಸ ಪ್ರಕರಣ, 19 ಮಂದಿ ಸಾವು

Last Updated 3 ಏಪ್ರಿಲ್ 2021, 14:22 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 4,373 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 19 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವರೆಗೂ ಕರ್ನಾಟಕದಲ್ಲಿ 10,10,602 ಪ್ರಕರಣಗಳು ದಾಖಲಾಗಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 12,610ಕ್ಕೆ ತಲುಪಿದೆ.

ಇಂದು 1,959 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ.

ರಾಜ್ಯದಲ್ಲಿ ಒಟ್ಟು 36,614 ಸಕ್ರಿಯ ಪ್ರಕರಣಗಳಿದ್ದು, ಈ ವರೆಗೆ 9,61,359 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ರಾಜ್ಯದಾದ್ಯಂತ 327 ಸೋಂಕಿತರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು 3,002 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದ್ದು, 6 ಮಂದಿ ಸಾವಿಗೀಡಾಗಿದ್ದಾರೆ.

ಬೀದರ್‌ನಲ್ಲಿ 172, ಮೈಸೂರಿನಲ್ಲಿ 171, ತುಮಕೂರಿನಲ್ಲಿ 167, ದಕ್ಷಿಣ ಕನ್ನಡದಲ್ಲಿ 83 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT