ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಮತ್ತೆ ಉಲ್ಬಣಗೊಂಡ ಕೊರೊನಾ ಸೋಂಕು: ಅಶ್ವತ್ಥನಾರಾಯಣ

ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಮಾರುಕಟ್ಟೆಪ್ರದೇಶಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ವಿಚಾರವಾಗಿ ಶುಕ್ರವಾರ ಟ್ವೀಟ್‌ ಮಾಡಿರುವ ಅವರು, 'ಬೆಂಗಳೂರಿನ ಮಾರ್ಕೆಟ್ ಪ್ರದೇಶಗಳು ಹಾಗೂ 10ಕ್ಕೂ ಹೆಚ್ಚಿನ ವಾರ್ಡ್‌ಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ' ಎಂದು ಹೇಳಿದ್ದಾರೆ.

'ಸಡಿಲಗೊಂಡ ನಿಯಮಗಳನ್ನು ದುರುಪಯೋಗಪಡಿಸದೆ, ನಾಗರಿಕರು ಕಟ್ಟುನಿಟ್ಟಾಗಿ ದೈಹಿಕ ಅಂತರ, ಮಾಸ್ಕ್ ಧಾರಣೆ, ಮುಂತಾದ ಅಗತ್ಯ ಕ್ರಮಗಳನ್ನು ಪಾಲಿಸಬೇಕಾಗಿದೆ. ಮೂರನೇ ಅಲೆಯನ್ನು ತಡೆಯೋಣ' ಎಂದು ಅಶ್ವತ್ಥನಾರಾಯಣ ಟ್ವೀಟ್‌ ಮಾಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರದಾದ್ಯಂತ 426 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, 9 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. 8, 467 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT