ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 2,016 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.57 ಲಕ್ಷಕ್ಕೆ ಏರಿಕೆಯಾಗಿದೆ.

ಈ ತಿಂಗಳ 13 ದಿನಗಳ ಅವಧಿಯಲ್ಲಿ 34,516 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,655 ಮಂದಿ ಸೋಂಕಿತರಾಗಿದ್ದಾರೆ. ಪೀಡಿತರಲ್ಲಿ 17 ಮಂದಿ ಮೃತಪಟ್ಟಿರುವುದು ದೃಢಪಟ್ಟಿದ್ದು, ಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,491ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ 1,200 ಮಂದಿ ಸೇರಿದಂತೆ ರಾಜ್ಯದಲ್ಲಿ 3,443 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 8.18 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 28,026ಕ್ಕೆ ಇಳಿಕೆಯಾಗಿದ್ದು, ಇದರಲ್ಲಿ 781 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಒಂದೇ ದಿನ 1.17 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 92.76 ಲಕ್ಷ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ 14 ದಿನಗಳಲ್ಲಿ 1.99 ಲಕ್ಷ ನೇರ ಸಂಪರ್ಕಿತರು ಹಾಗೂ 2.12 ಲಕ್ಷ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ. 7 ದಿನಗಳ ಅವಧಿಯಲ್ಲಿ 39,325 ಮಂದಿಯನ್ನು ಮನೆ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.

ಬೆಂಗಳೂರಿನಲ್ಲಿ 1,030 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.55 ಲಕ್ಷ ದಾಟಿದೆ. ತುಮಕೂರಿನಲ್ಲಿ ಹೊಸದಾಗಿ 184 ಪ್ರಕರಣಗಳು ಪತ್ತೆಯಾಗಿವೆ. ಮಂಡ್ಯ (69), ದಕ್ಷಿಣ ಕನ್ನಡ (67), ಮೈಸೂರು (64), ಹಾಸನ (60) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿದೆ.

ಕಾಲೇಜು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ

ಬೆಂಗಳೂರು: ಕಾಲೇಜುಗಳು ಪುನರಾರಂಭ ಆಗುತ್ತಿರುವುದರಿಂದ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಅಲ್ಲಿನ ಸಿಬ್ಬಂದಿಗೆ ಆರ್ಟಿ–ಪಿಸಿಆರ್ ಮಾದರಿಯ ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಸಂಬಂಧ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ನ.17ರ ಬಳಿಕ ಎಲ್ಲ ಕಾಲೇಜುಗಳು ಹಾಗೂ ಹಾಸ್ಟೆಲ್ಗಳು ಪ್ರಾರಂಭವಾಗಲಿವೆ. ಸರ್ಕಾರ ಹೊರಡಿಸಿರುವ ಪ್ರಮಾಣಿತ ಕಾರ್ಯಾಚರಣೆ ವಿಧಾನದ ಪ್ರಕಾರ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಅಲ್ಲಿನ ಸಿಬ್ಬಂದಿಯು ಕೊರೊನಾ ಸೋಂಕು ತಗುಲಿರದ ಬಗ್ಗೆ ವರದಿ ಹಾಜರುಪಡಿಸಬೇಕು. ಆ ವರದಿ 72 ಗಂಟೆಗಳನ್ನು ಮೀರಿರಬಾರದು. ಹಾಗಾಗಿ ಕೂಡಲೇ ಆರೋಗ್ಯ ಸಿಬ್ಬಂದಿ ಅವರ ಮೂಗು ಹಾಗೂ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯಗಳಿಗೆ ರವಾನಿಸಬೇಕು.

ವರದಿ ಫಲಿತಾಂಶವನ್ನು ವ್ಯಕ್ತಿಯ ದೂರವಾಣಿ ಸಂಖ್ಯೆಗೆ ರವಾನಿಸಬೇಕು. ಕಡ್ಡಾಯವಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನ (ಐಸಿಎಂಆರ್) ಪೋರ್ಟಲ್ನಲ್ಲಿ ನಮೂದಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.