ಬುಧವಾರ, ನವೆಂಬರ್ 25, 2020
18 °C

ಕೋವಿಡ್ ಪ್ರಕರಣ: ಮೃತರ ಸಂಖ್ಯೆ 11 ಸಾವಿರದತ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 20 ಮಂದಿ ಸೇರಿದಂತೆ ರಾಜ್ಯದಲ್ಲಿ 42 ಮಂದಿ ಮೃತಪಟ್ಟಿರುವುದು ಸೋಮವಾರ ದೃಢಪಟ್ಟಿದೆ. ಇದರಿಂದಾಗಿ ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 11 ಸಾವಿರದ ಗಡಿಯನ್ನು (10,947) ಮುಟ್ಟಲಿದೆ.

ರಾಜ್ಯದಲ್ಲಿ ಹೊಸದಾಗಿ 3,130 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇವು ಕಳೆದ ಮೂರು ತಿಂಗಳಲ್ಲೇ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಕನಿಷ್ಠ ಪ್ರಕರಣಗಳಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8 ಲಕ್ಷದ ಗಡಿ (8.05 ಲಕ್ಷ) ದಾಟಿದೆ. ಕಾಯಿಲೆಯಿಂದ ಮೃತಪಡುವವರ ಸಂಖ್ಯೆ ಕೂಡ ಇಳಿಕೆ ಕಂಡಿದ್ದು, 7 ದಿನಗಳ ಅವಧಿಯಲ್ಲಿ 405 ಮಂದಿ ಸಾವಿಗೀಡಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 57 ಮಂದಿ ಮೃತಪಟ್ಟಿರುವುದು ಖಚಿತಪಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು