ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಐದು ತಿಂಗಳಲ್ಲೇ ಮರಣ ಪ್ರಕರಣ ಕಡಿಮೆ

Last Updated 13 ಡಿಸೆಂಬರ್ 2020, 19:56 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಪೀಡಿತರಲ್ಲಿ 5 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇವು ಕಳೆದ ಐದು ತಿಂಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಅತೀ ಕಡಿಮೆ ಮರಣ ಪ್ರಕರಣಗಳಾಗಿವೆ. ಆದರೆ, ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆ ಮತ್ತೆ ಏರಿಕೆ ಕಂಡಿದೆ.

ಕಳೆದ ಒಂದು ತಿಂಗಳಿನಿಂದ ಐಸಿಯುವಿಗೆ ದಾಖಲಾಗುವವರ ಸಂಖ್ಯೆ ಇಳಿಕೆ ಕಂಡಿತ್ತು. 24 ಗಂಟೆಗಳ ಅವಧಿಯಲ್ಲಿ 16 ಮಂದಿ ಐಸಿಯುವಿಗೆ ದಾಖಲಾಗಿದ್ದು, ಸದ್ಯ 260 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 1,196 ಕೋವಿಡ್ ಪ್ರಕರಣಗಳು ವರದಿಯಾಗಿದೆ. ಇದರಿಂದಾಗಿ ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.01 ಲಕ್ಷ ದಾಟಿದೆ. ಈ ತಿಂಗಳು 13 ದಿನಗಳ ಅವಧಿಯಲ್ಲಿ 16,513 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 1,270 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ಕೋವಿಡ್‌ಗೆ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,944ಕ್ಕೆ ತಲುಪಿದೆ. ಒಂದೇ ದಿನ 88 ಸಾವಿರ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.23 ಕೋಟಿ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ. ಸೋಂಕಿತರಲ್ಲಿ 2,036 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 8.72 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಸದ್ಯ 17,409 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ 672 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.78 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 42 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 51,413ಕ್ಕೆ ತಲುಪಿದೆ. ಚಿಕ್ಕಬಳ್ಳಾಪುರದಲ್ಲಿ 55, ದಕ್ಷಿಣ ಕನ್ನಡದಲ್ಲಿ 36, ಬಳ್ಳಾರಿಯಲ್ಲಿ 36, ಚಿತ್ರದುರ್ಗದಲ್ಲಿ 33 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT