ಶುಕ್ರವಾರ, ಜೂನ್ 18, 2021
21 °C

ಸಿಎಂ ನೇತೃತ್ವದಲ್ಲಿ ಕೋವಿಡ್‌ ಸಮರ್ಥ ನಿರ್ವಹಣೆ– ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್‌ ನಿಯಂತ್ರಿಸಲು ಮುಖ್ಯಮಂತ್ರಿ ನೇತೃತ್ವದಲ್ಲಿ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ನಿರ್ವಹಣೆ ಕಾರ್ಯ ಸಮರ್ಥವಾಗಿ ಮಾಡುತ್ತಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಸೋಂಕು ವೇಗವಾಗಿ ಹಬ್ಬುತ್ತಿದೆ. ಬೇಡಿಕೆ ಪೂರೈಸಲು ಮುಖ್ಯಮಂತ್ರಿ ನಾಯಕತ್ವದಲ್ಲಿ ಬಹಳಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಬಿಜೆಪಿ ಕಾರ್ಯಕರ್ತರು ಕೋವಿಡ್ ನಿಯಂತ್ರಣ ಕೆಲಸ‌ ಮಾಡುತ್ತಿದ್ದಾರೆ’ ಎಂದರು.

‘ಕೋವಿಡ್‌ ರೋಗಿಗಳ ಚಿಕಿತ್ಸೆಗಾಗಿ ರಾಜ್ಯದಲ್ಲಿ 70 ಸಾವಿರ ಹಾಸಿಗೆಗಳನ್ನು ಮೀಸಲಿರಿಸಿದ್ದೇವೆ.  ಸರ್ಕಾರದಿಂದ 35 ಸಾವಿರ ಹಾಸಿಗೆ ನೀಡಲಾಗುತ್ತಿದೆ. ಆಮ್ಲಜನಕ ಸೌಲಭ್ಯದ 50 ಸಾವಿರಕ್ಕೂ ಹೆಚ್ಚು ಹಾಸಿಗೆಗಳಿವೆ. 970 ಟನ್ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. ರಾಜ್ಯಕ್ಕೆ 1,200 ಟನ್​ ಹಂಚಿಕೆ ಮಾಡಲು ಕೋರ್ಟ್ ನಿರ್ದೇಶನ ನೀಡಿದೆ. ಇನ್ನೂ 10 ಸಾವಿರ ಹಾಸಿಗೆ ಹೆಚ್ಚಿಸಲು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು.

‘ತಾಲ್ಲೂಕುಮಟ್ಟದಲ್ಲೂ ಕೇಂದ್ರವನ್ನೂ ನಿರ್ಮಿಸುತ್ತಿದ್ದೇವೆ. ಅಲ್ಲೂ ಆಮ್ಲಜನಕ ಸೌಲಭ್ಯದ ಹಾಸಿಗೆ ಪೂರೈಕೆ ಮಾಡುತ್ತೇವೆ. ರೆಮ್‌ಡಿಸಿವಿರ್​​ಗೆ ಸಾಕಷ್ಟು ಹೆಚ್ಚಿನ ಬೇಡಿಕೆ ಇದೆ. ಕೇಂದ್ರ ಸರ್ಕಾರವೂ ನೆರವು ನೀಡುತ್ತಿದೆ’ ಎಂಡಿದರು.

'ಸುಮಾರು 1.50 ಲಕ್ಷ ಆರ್​ಟಿಪಿಸಿಆರ್ ತಪಾಸಣೆ ಸರ್ಕಾರದಿಂದ ನಡೆಯುತ್ತಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರ‍್ಯಾಪಿಡ್ ಆಂಟಿಜೆನ್​​ ಟೆಸ್ಟ್​​ಗಳನ್ನು ಮಾಡುತ್ತಿದ್ದೇವೆ. 24 ಗಂಟೆ ಒಳಗೆ ಈ ಆರ್​​​ಪಿಸಿಆರ್ ವರದಿ ಕೊಡಬೇಕು. ಕೋವಿಡ್ ಲಕ್ಷಣ ಹೆಚ್ಚಳಗೊಂಡು ಜೀವಕ್ಕೆ ಅಪಾಯ ಆಗುತ್ತಿದೆ. ಈ ಎಲ್ಲ ಸಮಸ್ಯೆ ನಿವಾರಣೆ ಮಾಡುತ್ತಿದ್ದೇವೆ. ರಾಜ್ಯದ ಎಲ್ಲ ಕಡೆ ಔಷಧ, ಮಾತ್ರೆಗಳನ್ನು ಸಂಪೂರ್ಣವಾಗಿ ಒದಗಿಸುವ ಕೆಲಸ ಮಾಡುತ್ತಿದ್ದೇವೆ. ಇನ್ನೂ ಎರಡು ದಿನಗಳಲ್ಲಿ ಅದನ್ನು ದೊಡ್ಡ ಮಟ್ಟದಲ್ಲಿ ಮಾಡುತ್ತೇವೆ’ ಎಂದರು.

ಸ್ವಪಕ್ಷೀಯರಿಗೆ ಉತ್ತರಿಸುತ್ತೇವೆ: ‘ಜಿಂದಾಲ್​​ಗೆ ಭೂಮಿ ಪರಭಾರೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ ಭೂಮಿ ಪರಭಾರೆ ಮಾಡಿದ್ದೇವೆ. ಹಿಂದಿನ ಸರ್ಕಾರ ಈ ಬಗ್ಗೆ ಸರಿಯಾಗಿ ಮತ್ತು ಸ್ಪಷ್ಟವಾಗಿ ಮಾಹಿತಿ ನೀಡಿರಲಿಲ್ಲ. ಈಗ ಸರಿಯಾದ ಕ್ರಮದಲ್ಲಿ ಮಾಡಿದ್ದೇವೆ’’ ಎಂದು ಸಮರ್ಥಿಸಿಕೊಂಡರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು