ಸೋಮವಾರ, ಮೇ 23, 2022
28 °C

ಕೋವಿಡ್: ಗುತ್ತಿಗೆ ನೌಕರರ ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಕಾರಣ ಸಮರ್ಪಕ ವೈದ್ಯಕೀಯ ಸೇವೆಗಳನ್ನು ಒದಗಿಸಲು ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಯ ಕಾರ್ಯಾವಧಿಯನ್ನು ಮಾರ್ಚ್‌ವರೆಗೆ ಆರೋಗ್ಯ ಇಲಾಖೆ ವಿಸ್ತರಿಸಿದೆ.

ಈ ಸಂಬಂಧ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಸುತ್ತೋಲೆ ಹೊರಡಿಸಿದ್ದಾರೆ. ಪ್ರತಿ ಜಿಲ್ಲೆಗೆ ತಾತ್ಕಾಲಿಕವಾಗಿ 45 ಹುದ್ದೆಗಳಂತೆ 18 ಜಿಲ್ಲೆಗಳಿಗೆ ಈ ಹಿಂದೆ ನೇಮಕ ಮಾಡಿಕೊಳ್ಳಲಾಗಿತ್ತು. ಇದರಲ್ಲಿ 10 ವೈದ್ಯರು, 20 ಶುಶ್ರೂಷಕರು, 5 ಪ್ರಯೋಗಶಾಲಾ ತಂತ್ರಜ್ಞರು ಹಾಗೂ 10 ಗ್ರೂಪ್ ಡಿ ಸಿಬ್ಬಂದಿ ಸೇರಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಒಟ್ಟು 12 ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ 707 ವೈದ್ಯರು ಹಾಗೂ ಸಿಬ್ಬಂದಿಯನ್ನು ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ಅದೇ ರೀತಿ, ಪ್ರಯೋಗಾಲಯಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ವಿವಿಧೆಡೆ ಅಗತ್ಯ ಇರುವ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು