ಸೋಮವಾರ, ಅಕ್ಟೋಬರ್ 18, 2021
22 °C

ರಾಜ್ಯದಲ್ಲೂ ಅಪರಾಧ ತಗ್ಗಿಸಿದ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ 2020ರಲ್ಲಿ ಅಪರಾಧಗಳ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಕೊರೊನಾ ಸೋಂಕು ಹಾಗೂ ಅದರ ನಿಯಂತ್ರಣಕ್ಕೆ ಜಾರಿಗೊಳಿಸಿದ್ದ ಲಾಕಡೌನ್‌ ಅವಧಿಯಲ್ಲಿ ಅಪರಾಧಗಳು ತಗ್ಗಿವೆ.

ರಾಷ್ಟ್ರೀಯ ಅಪರಾಧಗಳ ದಾಖಲೆ ಬ್ಯುರೊ (ಎನ್‌ಸಿಆರ್‌ಬಿ) 2020ರ ದಾಖಲೆ ಬಿಡುಗಡೆ ಮಾಡಿದೆ. ರಾಜ್ಯದ ಅಪರಾಧ ವಿವರಗಳನ್ನು ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ 2018ರಲ್ಲಿ 1,26,534 ಅಪರಾಧ ಪ್ರಕರಣಗಳು ದಾಖಲಾಗಿದ್ದವು. 2020ರಲ್ಲಿ ಅದರ ಪ್ರಮಾಣ 1,06,350 ಇದೆ. ಬೆಂಗಳೂರಿನಲ್ಲಿ 2018ರಲ್ಲಿ 39,976 ಪ್ರಕರಣಗಳು ವರದಿಯಾಗಿದ್ದವು. 2020ರಲ್ಲಿ 34,156 ಪ್ರಕರಣಗಳು ಮಾತ್ರ ದಾಖಲಾಗಿವೆ. ಸೈಬರ್ ಅಪರಾಧಗಳ ದಾಖಲಾತಿಯಲ್ಲಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಮುಂದಿದೆ. ಅಪರಾಧ ಪ್ರಕರಣಗಳ ಅಂಕಿ–ಅಂಶ ವಿವರವನ್ನು ಇಲ್ಲಿ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು