ಶನಿವಾರ, ಮೇ 15, 2021
24 °C

ಕೋವಿಡ್: ದೂರು ಸ್ವೀಕರಿಸುವ ವ್ಯವಸ್ಥೆ ರೂಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮಾಸ್ಕ್ ಧರಿಸುವುದು, ಅಂತರ ಕಾಪಾಡುವುದು ಸೇರಿ ಕೋವಿಡ್ ನಿಯಮಗಳ ಉಲ್ಲಂಘನೆ ಬಗ್ಗೆ ನಾಗರಿಕರಿಂದ ದೂರುಗಳನ್ನು ಸ್ವೀಕರಿಸಲು ಮೂರು ದಿನಗಳಲ್ಲಿ ವ್ಯವಸ್ಥೆ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

‘ಇ–ಮೇಲ್ ಮತ್ತು ವಾಟ್ಸ್‌ಆ್ಯಪ್ ಮೂಲಕವೂ ದೂರುಗಳನ್ನು ಸಲ್ಲಿಸಲು ಅವಕಾಶ ಆಗುವಂತೆ ಕಾರ್ಯವಿಧಾನ ರೂಪಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ತಿಳಿಸಿತು.

‘ಅಹವಾಲು ಸ್ವೀಕರಿಸುವ ವ್ಯವಸ್ಥೆ ಇದ್ದರೆ ನಾಗರಿಕರ ದೂರುಗಳನ್ನು ರಾಜ್ಯ ಮಟ್ಟದ ಸಮಿತಿ ಮತ್ತು ಬೆಂಗಳೂರು ನಗರ ಸಮಿತಿ ಕೂಡಲೇ ಪರಿಶೀಲಿಸಬಹುದು. ದೂರು ನೀಡಲು ಕಾರ್ಯವಿಧಾನ ರೂಪಿಸಿ ಮಾಧ್ಯಮಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಬಿಬಿಎಂಪಿ ಸೇರಿ ಸ್ಥಳೀಯ ಕಚೇರಿಗಳಲ್ಲಿ ಈ ಮಾಹಿತಿ ಪ್ರಕಟಿಸಬೇಕು’ ಎಂದು ಹೇಳಿತು.

ಕೋವಿಡ್ ಹರಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಮಹಾನಿರ್ದೇಶಕರು ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಪೀಠಕ್ಕೆ ಸಲ್ಲಿಸಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು