ಗುರುವಾರ , ಜನವರಿ 28, 2021
23 °C

Covid-19 Karnataka Update: 24 ಗಂಟೆಗಳಲ್ಲಿ 1,400 ಹೊಸ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್‌ ಸೋಂಕು ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹ–ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,400 ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 16 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಒಟ್ಟು 8,87,667 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 8,51,690 ಮಂದಿ ಗುಣಮುಖರಾಗಿದ್ದಾರೆ ಹಾಗೂ 11,808 ಮಂದಿ ಸಾವಿಗೀಡಾಗಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ 24,150 ಸಕ್ರಿಯ ಪ್ರಕರಣಗಳಿವೆ. ಬುಧವಾರ 983 ಮಂದಿ ಗುಣಮುಖರಾಗಿದ್ದಾರೆ ಹಾಗೂ 318 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತಿ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 712 ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ 10 ಮಂದಿ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿ 80 ಪ್ರಕರಣಗಳು, ಮೈಸೂರಿನಲ್ಲಿ 64, ಮಂಡ್ಯದಲ್ಲಿ 52 ಹಾಗೂ ಚಿತ್ರದುರ್ಗದಲ್ಲಿ 46 ಕೋವಿಡ್‌–19 ಪ್ರಕರಣಗಳು ದಾಖಲಾಗಿವೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು