ಶನಿವಾರ, ಆಗಸ್ಟ್ 13, 2022
24 °C
4.21 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಮತ್ತೆ 9,540 ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 9,540 ಕೋವಿಡ್ ಪ್ರಕರಣಗಳು ಬುಧವಾರ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4.21 ಲಕ್ಷ ದಾಟಿದೆ. 

ಎರಡು ದಿನಗಳಿಂದ 8 ಸಾವಿರದ ಗಡಿಯ ಆಸು‍ಪಾಸಿನಲ್ಲಿದ್ದ ಪ್ರಕರಣಗಳ ಸಂಖ್ಯೆ ಮತ್ತೆ 9 ಸಾವಿರದ ಗಡಿ ದಾಟಿದೆ. ಈ ತಿಂಗಳಲ್ಲಿ 79,307 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದ್ದು, ಪ್ರತಿನಿತ್ಯ ಸರಾಸರಿ 8,811 ಮಂದಿ ಕೋವಿಡ್‌ ಪೀಡಿತರಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 10.31ರಷ್ಟಿದೆ. ಕೋವಿಡ್ ಪೀಡಿತರಲ್ಲಿ 128 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಕೋವಿಡ್‌ಗೆ ಈವರೆಗೆ ಸಾವಿಗೀಡಾದವರ ಸಂಖ್ಯೆ 6,808ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಂದೇ ದಿನ 34,264 ಆ್ಯಂಟಿಜೆನ್‌ ಸೇರಿದಂತೆ 70,322 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ಕೋವಿಡ್ ಪರೀಕ್ಷೆಗೆ ಒಳಪಟ್ಟವರ ಸಂಖ್ಯೆ 35.31 ಲಕ್ಷ ತಲುಪಿದೆ. ಬೆಂಗಳೂರಿನಲ್ಲಿ 1,564 ಮಂದಿ ಸೇರಿದಂತೆ ರಾಜ್ಯದಲ್ಲಿ ಮತ್ತೆ 6,860 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 3.15 ಲಕ್ಷ ತಲುಪಿದೆ. 99 ಸಾವಿರಕ್ಕೂ ಅಧಿಕ ಸೋಂಕಿತರು ಸದ್ಯ ಆಸ್ಪತ್ರೆಗಳು, ಕೋವಿಡ್‌ ಆರೈಕೆ ಕೇಂದ್ರಗಳು ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕಳೆದ 14 ದಿನಗಳಲ್ಲಿ ಕೋವಿಡ್‌ ಪೀಡಿತರೊಂದಿಗೆ ನೇರ ಸಂಪರ್ಕ ಹೊಂದಿದ್ದ 5.94 ಲಕ್ಷ ಮಂದಿಯನ್ನು ಗುರುತಿಸಲಾಗಿದೆ. 5.13 ಲಕ್ಷ ಮಂದಿ ಮನೆ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಹೊಸದಾಗಿ 3,419 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1.57 ಲಕ್ಷ ದಾಟಿದೆ. ಬಳ್ಳಾರಿಯಲ್ಲಿ ಮತ್ತೆ 559 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 25 ಸಾವಿರ ದಾಟಿದೆ. ಶಿವಮೊಗ್ಗ ಹಾಗೂ ಮೈಸೂರಿನಲ್ಲಿ ಹೊಸದಾಗಿ 500ಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ (390), ದಕ್ಷಿಣ ಕನ್ನಡ (310), ಹಾಸನ (270), ಉತ್ತರ ಕನ್ನಡ (260), ಉಡುಪಿ (258) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು