ಸೋಮವಾರ, ಜೂನ್ 21, 2021
21 °C

Covid-19 Karnataka Update: ನಾಲ್ಕು ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 115 ಮಂದಿ ಸಾವಿಗೀಡಾಗುವುದರೊಂದಿಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ ನಾಲ್ಕು ಸಾವಿರದ (4,062) ಗಡಿ ದಾಟಿದೆ. 

ಹೊಸದಾಗಿ 6,317 ಮಂದಿಗೆ ಸೋಂಕು ತಗುಲಿದ್ದರೆ, 7,071 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿನ ಪ್ರಕರಣಗಳ ಸಂಖ್ಯೆ 2,33,283ಕ್ಕೆ ತಲುಪಿದೆ. ಗುಣಮುಖರಾಗುತ್ತಿರುವವರ ಪ್ರಮಾಣವೂ ಹೆಚ್ಚಾಗಿದ್ದು, ಒಟ್ಟು 1,48,562 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 

ಸದ್ಯ 80,643 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಆಸ್ಪತ್ರೆ, ಕೊರೊನಾ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಪೈಕಿ 695 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆ.17ರಂದು ರ‍್ಯಾಪಿಡ್ ಆ್ಯಂಟಿಜನ್, ಆರ್‌ಟಿ–ಪಿಸಿಆರ್ ಸೇರಿ ಒಟ್ಟು 37,700 ಸೋಂಕು ಪರೀಕ್ಷೆಗಳು ನಡೆದಿವೆ. 

ಜಿಲ್ಲಾವಾರು ಸೋಂಕು ಪ್ರಕರಣ: ಬೆಂಗಳೂರಿನಲ್ಲಿ ಒಂದೇ ದಿನ 2,053 ಮಂದಿಗೆ ಸೋಂಕು ದೃಢಪಟ್ಟಿದ್ದು, 39 ಜನ ಸಾವಿಗೀಡಾಗಿದ್ದಾರೆ. ಅದೇ ರೀತಿ, ಮೈಸೂರು (597), ಶಿವಮೊಗ್ಗ (397), ಬಳ್ಳಾರಿ (319), ಉಡುಪಿ (268), ಹಾಸನ (250), ಕಲಬುರಗಿ (211) ಹಾಗೂ ಧಾರವಾಡದಲ್ಲಿ (201) ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಬೆಳಗಾವಿಯಲ್ಲಿ 9, ದಕ್ಷಿಣ ಕನ್ನಡದಲ್ಲಿ 8, ಹಾಸನ 9, ಕಲಬುರಗಿ 7, ಮೈಸೂರಿನಲ್ಲಿ ಐವರು ಸೋಮವಾರ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು