ಭಾನುವಾರ, ಮೇ 29, 2022
30 °C

Covid Karnataka Update | ಇಂದು 46,426 ಪ್ರಕರಣಗಳು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 46,426 ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. ಆದರೆ, ಹಿಂದಿನ ದಿನ (ಭಾನುವಾರ)ಕ್ಕೆ ಹೋಲಿಸಿಕೊಂಡರೆ ಸೋಮವಾರ ಪ್ರಕರಣಗಳ ಸಂಖ್ಯೆಯಲ್ಲಿ ಕುಸಿತವಾಗಿದೆ. 

ಭಾನುವಾರ 50,210 ಪ್ರಕರಣಗಳು ವರದಿಯಾಗಿದ್ದವು. ಇಂದು ಹೆಚ್ಚು ಕಡಿಮೆ ಮೂರು ಸಾವಿರದಷ್ಟು ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 35,64,108ಕ್ಕೆ ಏರಿಕೆಯಾಗಿದೆ. 

ಇನ್ನು ರಾಜ್ಯದಲ್ಲಿ 24 ಗಂಟೆಗಳಲ್ಲಿ 32 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 38,614ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 3,62,487 ಸಕ್ರಿಯ ಪ್ರಕರಣಗಳಿವೆ. 

ಈ ಒಂದು ದಿನದ ಅವಧಿಯಲ್ಲಿ 41,703 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 

ಬೆಂಗಳೂರಿನಲ್ಲಿ ಇಂದು 21,569 ಪ್ರಕರಣಗಳು ವರದಿಯಾಗಿವೆ. 9 ಮಂದಿ ಮೃತಪಟ್ಟಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು